alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಹಾಗೆಯೇ ಮಾಡಿದ್ದಾರೆ ಅಮಿತ್ ಶಾ….

amit-si

ಬೆಂಗಳೂರು: ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯದಲ್ಲಿ 3 ದಿನಗಳ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಮಠಾಧೀಶರನ್ನು ಭೇಟಿ ಮಾಡಿದ್ದಾರೆ.

ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿದ್ದ ಅಮಿತ್ ಶಾ, ಭೇಟಿಯ ಸಂದರ್ಭದಲ್ಲಿ ಶ್ರೀಗಳ ಎದುರು ಕಾಲು ಮೇಲೆ ಕಾಲು ಹಾಕಿಕೊಂಡು ಕುಳಿತಿದ್ದು, ಅಸಮಾಧಾನಕ್ಕೆ ಕಾರಣವಾಗಿತ್ತು.

ಬೆಂಗಳೂರಿನ ತರಲಘಟ್ಟಪುರದಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಏರ್ಪಡಿಸಿದ್ದ ಸತ್ಸಂಗದಲ್ಲಿ ಪಾಲ್ಗೊಂಡಿದ್ದ ಅಮಿತ್ ಶಾ ಅವರು ಅಲ್ಲಿಯೂ ಕಾಲ ಮೇಲೆ ಕಾಲು ಹಾಕಿಕೊಂಡು ಕುಳಿತಿದ್ದಾರೆ.

ರವಿಶಂಕರ್ ಗುರೂಜಿ ಪಕ್ಕದಲ್ಲೇ ಕುಳಿತಿದ್ದ ಅವರು, ಕಾರ್ಯಕ್ರಮದಲ್ಲಿ ಕಾಲ ಮೇಲೆ ಕಾಲು ಹಾಕಿಕೊಂಡು ಕುಳಿತಿದ್ದು, ಇದಕ್ಕೆ ಮತ್ತೆ ಅಸಮಾಧಾನ ವ್ಯಕ್ತವಾಗಿದೆ.

ಸ್ವಾಮೀಜಿಗಳ ಎದುರು ಹೀಗೆ ಕುಳಿತುಕೊಳ್ಳುವ ಮೂಲಕ ಅವರ ಸಂಸ್ಕೃತಿ ಏನೆಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...