alex Certify
ಕನ್ನಡ ದುನಿಯಾ       Mobile App
       

Kannada Duniya

ಲೋಕಸಭಾ ಚುನಾವಣೆಯ ಸಂಪೂರ್ಣ ಜವಾಬ್ದಾರಿ ಯಡಿಯೂರಪ್ಪನವರ ಹೆಗಲಿಗೆ

ಬೆಂಗಳೂರು: ಲೋಕಸಭಾ ಚುನಾವಣಾ ಗೆಲುವಿಗಾಗಿ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದ್ದು, ತಂತ್ರಗಳನ್ನು ಹೆಣೆದು ಕಾರ್ಯರೂಪಕ್ಕಿಳಿದಿದೆ. ಬಿಜೆಪಿ ಹೈಕಮಾಂಡ್ ಈಗಾಗಲೇ ಲೋಕಸಭಾ ಚುನಾವಣೆಯ ರಾಜ್ಯ ಉಸ್ತುವಾರಿ, ಚುನಾವಣಾ ಪ್ರಚಾರ, ರಣತಂತ್ರಗಳ ಸಂಪೂರ್ಣ ಜವಾಬ್ದಾರಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹೆಗಲಿಗೇರಿಸಿದ್ದು, ಚುನಾವಣಾ ಸಂಬಂಧ ಎಲ್ಲ ನಿರ್ಧಾರ ಕೈಗೊಳ್ಳುವ ಸಂಪೂರ್ಣ ಅಧಿಕಾರ ನೀಡಿದೆ.

ಯಡಿಯೂರಪ್ಪನವರು ಚುನಾವಣೆ ಪ್ರಚಾರದ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ರಾಜ್ಯ ಪ್ರವಾಸಕ್ಕೆ ತಯಾರಿ ನಡೆಸಿದ್ದಾರೆ. ಸಧ್ಯಕ್ಕೆ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಬಂದು ಪ್ರಚಾರ ನಡೆಸುವ ಕಾರ್ಯಕ್ರಮ ಮುಂದೂಡಲಾಗಿದೆ. ವಿಧಾನಸಭಾ ಚುನಾವಣೆಯಲ್ಲಾದ ತಪ್ಪಿನಿಂದ ಎಚ್ಚೆತ್ತುಕೊಂಡಿರುವ ಹೈಕಮಾಂಡ್, ರಾಜ್ಯಾಧ್ಯಕ್ಷ ಬಿ.ಎಸ್.ವೈ. ಅವರ ಹೆಗಲಿಗೆ ಸಂಪೂರ್ಣ ಹೊಣೆಗಾರಿಕೆ ನೀಡುವ ಮೂಲಕ ಜವಾಬ್ದಾರಿಯನ್ನು ವಹಿಸಿದೆ. ಹೀಗಾಗಿ ಆರಂಭದಲ್ಲಿ ರಾಜ್ಯ ನಾಯಕರೇ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಲೋಕಸಭೆಗೆ ರಾಜ್ಯದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅಧಿಕಾರವನ್ನೂ ಯಡಿಯೂರಪ್ಪನವರಿಗೆ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಯಡಿಯೂರಪ್ಪ ಮಾರ್ಗದರ್ಶನದಲ್ಲಿಯೇ ರಾಜ್ಯ ಚುನಾವಣಾ ಪ್ರವಾಸ ನಡೆಯಲಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಆಗಮಿಸಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...