alex Certify
ಕನ್ನಡ ದುನಿಯಾ       Mobile App
       

Kannada Duniya

ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದ ಬಿಜೆಪಿ ಶಾಸಕ

ರಾಜ್ಯ ಸರ್ಕಾರದ ವತಿಯಿಂದ ಇಂದು ರಾಜ್ಯದಾದ್ಯಂತ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಇದಕ್ಕೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವುದಲ್ಲದೇ ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಈ ಮಧ್ಯೆ ಬಳ್ಳಾರಿ ಜಿಲ್ಲೆ ಹೊಸಪೇಟೆಯ ವಿಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಸಿಂಗ್, ಹೊಸಪೇಟೆ ನಗರಸಭೆ ಆವಣದಲ್ಲಿ ಆಯೋಜಿಸಲಾಗಿದ್ದ ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಟಿಪ್ಪು ಜಯಂತಿಗೆ ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿರುವ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಸೇರಿದಂತೆ ಬಿಜೆಪಿಯ ಹಲವು ಚುನಾಯಿತ ಪ್ರತಿನಿಧಿಗಳು ತಮ್ಮ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಬಿಜೆಪಿ ಚುನಾಯಿತ ಪ್ರತಿನಿಧಿಗಳ ಹೆಸರನ್ನು ಕೈ ಬಿಡಲಾಗಿದ್ದರ ಮಧ್ಯೆ ಬಿಜೆಪಿ ಶಾಸಕ ಆನಂದ್ ಸಿಂಗ್, ಟಿಪ್ಪು ಜಯಂತಿಯಲ್ಲಿ ಭಾಗವಹಿಸುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...