alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಅನಂತ ಕುಮಾರ್ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ತಾತ್ಕಾಲಿಕ ನಿಷೇಧ

ಇಂದು ಬೆಳಗಿನ ಜಾವ ನಿಧನರಾದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ತಾತ್ಕಾಲಿಕವಾಗಿ ನಿಷೇಧ ವಿಧಿಸಲಾಗಿದೆ.

ನರೇಂದ್ರ ಮೋದಿಯವರು ಈಗಾಗಲೇ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಹೊರಟಿದ್ದು, ಕೆಲ ಸಮಯದಲ್ಲೇ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ನರೇಂದ್ರ ಮೋದಿಯವರು ಅನಂತ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುವ ವೇಳೆ ಅನಂತ ಕುಮಾರ್ ಅವರ ಕುಟುಂಬ ಸದಸ್ಯರು ಮಾತ್ರ ಉಪಸ್ಥಿತರಿರಲಿದ್ದಾರೆ. ಎಸ್.ಪಿ.ಜಿ. ಪಡೆ ಈಗಾಗಲೇ ಅನಂತಕುಮಾರ್ ಅವರ ನಿವಾಸದ ಬಳಿ ಬೀಡು ಬಿಟ್ಟಿದ್ದು, ವ್ಯಾಪಕ ಭದ್ರತೆ ಕೈಗೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...