alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಾರ ಜನಸ್ತೋಮದ ನಡುವೆ ಹರಿಪಾದ ಸೇರಿದ ಅನಂತ ಕುಮಾರ್

ಸೋಮವಾರದಂದು ವಿಧಿವಶರಾದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರ, ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ನೆರವೇರಿದ್ದು, ಅಪಾರ ಜನಸ್ತೋಮದ ನಡುವೆ ಅನಂತ ಕುಮಾರ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.

ಅನಂತ ಕುಮಾರ್ ಅವರ ಸಹೋದರ ನಂದಕುಮಾರ್ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದು, ಈ ಸಂದರ್ಭದಲ್ಲಿ ‘ಅನಂತಕುಮಾರ್ ಅಮರ್ ರಹೇ’ ಎಂಬ ಘೋಷಣೆಗಳು ಮುಗಿಲು ಮುಟ್ಟುವಂತೆ ಕೇಳಿ ಬಂದವು.

ಅಂತ್ಯ ಸಂಸ್ಕಾರದಲ್ಲಿ ಉಪಸ್ಥಿತರಿದ್ದ ಅನಂತ ಕುಮಾರ್ ಅವರ ಪತ್ನಿ ತೇಜಸ್ವಿನಿ, ಪುತ್ರಿಯರಾದ ಐಶ್ವರ್ಯ ಹಾಗೂ ವಿಜೇತಾರ ಕಣ್ಣಾಲಿಗಳು ತುಂಬಿ ಬಂದಿದ್ದು, ನೆರೆದವರ ಮನ ಕಲಕಿತು.

ಅಂತ್ಯಸಂಸ್ಕಾರ ನಡೆಯುವ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಗಣ್ಯರು ಹಾಗೂ ಸಾರ್ವಜನಿಕರು ನೆರೆದಿದ್ದರಲ್ಲದೆ ರುದ್ರಭೂಮಿಯ ಹೊರಗೂ ಜನ ಜಮಾಯಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...