alex Certify
ಕನ್ನಡ ದುನಿಯಾ       Mobile App
       

Kannada Duniya

ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ

ಮಿನಿ ಅಂಗನವಾಡಿಗಳ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಪದಾಧಿಕಾರಿಗಳೊಂದಿಗಿನ ಮಾತುಕತೆ ಸಂದರ್ಭದಲ್ಲಿ ತೀರ್ಮಾನಿಸಿದಂತೆ, ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಬಡ್ತಿ ನೀಡಲು ನಿರ್ಧರಿಸಲಾಗಿದೆ.

ಮೊದಲ ಹಂತದಲ್ಲಿ ಮುಖ್ಯ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರ ಹುದ್ದೆಗಳಿಗೆ ಮಾತ್ರ ಬಡ್ತಿ ಸಿಗಲಿದೆ. ಇದರ ಜೊತೆಗೆ ಅಂಗನವಾಡಿ ಕಟ್ಟಡಕ್ಕಾಗಿ ನೀಡುತ್ತಿದ್ದ ಬಾಡಿಗೆ ಮೊತ್ತವನ್ನೂ ಹೆಚ್ಚಿಸಲಾಗಿದೆ.

ಈ ಹಿಂದೆ 700 ರೂ. ಇದ್ದ ಬಾಡಿಗೆಯನ್ನು 1000 ಕ್ಕೆ, 3 ಸಾವಿರದಿಂದ 4 ಸಾವಿರಕ್ಕೆ ಹಾಗೂ 5 ಸಾವಿರದಿಂದ 6 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅಲ್ಲದೆ ವಿಳಂಬವಾಗುತ್ತಿರುವ ಸಂಬಳದ ಸಮಸ್ಯೆಯನ್ನು ಬಗೆಹರಿಸಲೂ ಸರ್ಕಾರ ಮುಂದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...