alex Certify
ಕನ್ನಡ ದುನಿಯಾ       Mobile App
       

Kannada Duniya

ಅನುಪಮಾ ಶೆಣೈ ಪ್ರಕರಣಕ್ಕೆ ಹೊಸ ಟ್ವಿಸ್ಟ್

ANUPAMA_SHENOY_28

ಬೆಂಗಳೂರು: ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಡಿ.ವೈ.ಎಸ್.ಪಿ.ಯಾಗಿದ್ದ ಅನುಪಮಾ ಶೆಣೈ, ಈಗಾಗಲೇ ರಾಜೀನಾಮೆ ನೀಡಿದ್ದು, ಸೇವೆಯಿಂದ ಬಿಡುಗಡೆ ಹೊಂದಿದ್ದಾರೆ. ಇದೀಗ ಅವರು ರಾಜ್ಯದ ಪೊಲೀಸ್ ಮಹಾ ನಿರ್ದೇಶಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಪೊಲೀಸ್ ಮಹಾ ನಿರ್ದೇಶಕರು ರಾಜಕೀಯ ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಿದ್ದು, ಆಡಳಿತ ನಡೆಸಲು ವಿಫಲರಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಅನುಪಮಾ ಶೆಣೈ ತಮ್ಮ ವರ್ಗಾವಣೆ ಸಂದರ್ಭದಲ್ಲಿ ಪೊಲೀಸ್ ಮಹಾ ನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿರುವ ದೂರವಾಣಿ ಸಂಭಾಷಣೆಗಳನ್ನು ಬಹಿರಂಗಪಡಿಸಿದ್ದಾರೆ.

ಇದರಲ್ಲಿ ಪೊಲೀಸ್ ಅಧಿಕಾರಿಗಳು ಒತ್ತಡ ಹೇರಿದ್ದಾರೆ. ವರ್ಗಾವಣೆ ಬಗ್ಗೆ ಪ್ರಸ್ತಾಪಿಸಿ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಹೇಳಲಾಗಿದೆ. ತಮ್ಮ ಮೇಲೆ ಹಾಕಿರುವ ಒತ್ತಡದ ಬಗ್ಗೆ ಹಾಗೂ ಇಲಾಖೆಯ ಪರಿಸ್ಥಿತಿ ಬಗ್ಗೆ ಅನುಪಮಾ ಶೆಣೈ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...