alex Certify
ಕನ್ನಡ ದುನಿಯಾ       Mobile App
       

Kannada Duniya

ಏಪ್ರಿಲ್ 28 ರಂದು ‘ಬೆಂಗಳೂರು ಬಂದ್’

kattappa8ಕನ್ನಡಿಗರ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿರುವ ‘ಬಾಹುಬಲಿ’ ಯ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ನಟಿಸಿರುವ, ರಾಜಮೌಳಿ ನಿರ್ದೇಶನದ ‘ಬಾಹುಬಲಿ-ದಿ ಕನ್ ಕ್ಲೂಸನ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡುವುದನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಏಪ್ರಿಲ್ 28 ರಂದು ‘ಬೆಂಗಳೂರು ಬಂದ್’ ಗೆ ಕರೆ ನೀಡಿವೆ.

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ನಡೆಸಲಾದ ಪತ್ರಿಕಾಗೋಷ್ಟಿಯಲ್ಲಿ ಈ ಕುರಿತು ಮಾತನಾಡಿರುವ ವಾಟಾಳ್ ನಾಗರಾಜ್, ಕನ್ನಡಿಗರ ಕುರಿತು ಹುಚ್ಚುಚ್ಚಾಗಿ ಮಾತನಾಡಿರುವ ಸತ್ಯರಾಜ್, ಕನ್ನಡಿಗರ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.

ತಾವು ‘ಬಾಹುಬಲಿ-ದಿ ಕನ್ ಕ್ಲೂಸನ್’ ಚಿತ್ರದ ವಿರುದ್ದ ಪ್ರತಿಭಟನೆ ನಡೆಸುತ್ತಿಲ್ಲ. ಇದರಲ್ಲಿ ನಟಿಸಿರುವ ಸತ್ಯರಾಜ್ ಹೇಳಿಕೆಯನ್ನು ಖಂಡಿಸಿ ಏಪ್ರಿಲ್ 28 ರಂದು ಪ್ರತಿಭಟನೆ ನಡೆಸುತ್ತಿದ್ದು, ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಪ್ರಮುಖರು ಹಾಜರಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...