alex Certify
ಕನ್ನಡ ದುನಿಯಾ       Mobile App
       

Kannada Duniya

ಅಡಿಕೆ, ಲಾರಿ ಸಮೇತ ಕಳ್ಳರು ಅರೆಸ್ಟ್

ದಾವಣಗೆರೆ: ಮಹತ್ವದ ಕಾರ್ಯಾಚರಣೆ ನಡೆಸಿರುವ ಚನ್ನಗಿರಿ ಠಾಣೆ ಪೊಲೀಸರು, ನಾಲ್ವರು ಅಡಿಕೆ ಕಳ್ಳರನ್ನು ಬಂಧಿಸಿದ್ದಾರೆ.

ರಾಮ, ರಾಮಚಂದ್ರ, ಧನಂಜಯ ಹಾಗೂ ರಮೇಶ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 23.35 ಲಕ್ಷ ರೂ. ಮೌಲ್ಯದ 53 ಕ್ವಿಂಟಾಲ್ ಅಡಿಕೆ ಹಾಗೂ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತರು ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹದಡಿ, ಸಂತೇಬೆನ್ನೂರು, ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಡಿಕೆ ಕಳ್ಳತನ ಮಾಡಿದ್ದರು. ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯಲ್ಲಿ 8 ಕಡೆ ಅಡಿಕೆ ಕಳವು ಮಾಡಿದ್ದ ಇವರನ್ನು ಚನ್ನಗಿರಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...