alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಕ್ಕೆ ಸಿಎಸ್ ಭೂ ವಿವಾದ ವರದಿ ಸಲ್ಲಿಕೆ..?

Arvind-Jadhav-

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಅವರು, ತಮ್ಮ ತಾಯಿಯ ಹೆಸರಿನಲ್ಲಿ ಜಮೀನು ಪಡೆದುಕೊಂಡಿರುವ ಕುರಿತಾದ ವರದಿಯನ್ನು, ಕಂದಾಯ ಇಲಾಖೆಯಿಂದ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಸಲ್ಲಿಸಲಾಗುವುದು.

ಮುಖ್ಯ ಕಾರ್ಯದರ್ಶಿ ಭಾಗಿಯಾಗಿದ್ದಾರೆ ಎನ್ನಲಾದ ಈ ಭೂ ಹಗರಣ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಸಿ.ಎಂ. ಹಾಗೂ ಕಂದಾಯ ಸಚಿವರ ಸೂಚನೆಯಂತೆ ಅಧಿಕಾರಿಗಳು, ಈಗಾಗಲೇ ವರದಿ ತಯಾರಿಸಿದ್ದಾರೆ. ಬೆಂಗಳೂರು ದಕ್ಷಿಣ ವಿಭಾಗದ ಉಪ ವಿಭಾಗಾಧಿಕಾರಿ ನಟೇಶ್ ಅವರು, ವರದಿಯನ್ನು ಸಿದ್ಧಪಡಿಸಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಶಂಕರ್ ಅವರಿಗೆ ಸಲ್ಲಿಸಿದ್ದಾರೆ. ಶಂಕರ್ ವರದಿ ಪರಿಶೀಲಿಸಿ, ಕಂದಾಯ ಇಲಾಖೆಗೆ ಸಲ್ಲಿಸಿದ್ದಾರೆ.

ಇಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಮಣರೆಡ್ಡಿ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ವರದಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ವರದಿ ಪರಿಶೀಲನೆ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...