alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಸ್ ಅರವಿಂದ್ ಜಾಧವ್ ಗೆ ಕ್ಲೀನ್ ಚಿಟ್

Arvind-Jadhav-

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಅವರ, ಭೂ ವಿವಾದಕ್ಕೆ ಸಂಬಂಧಿಸಿದಂತೆ ಕ್ಲೀನ್ ಚಿಟ್ ನೀಡಲಾಗಿದೆ. ಬೆಂಗಳೂರು ದಕ್ಷಿಣ ಉಪ ವಿಭಾಗಾಧಿಕಾರಿ ವರದಿ ನೀಡಿದ್ದು, ಎಲ್ಲವೂ ಕ್ರಮಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಅರವಿಂದ್ ಜಾಧವ್ ಅವರು, ತಮ್ಮ ತಾಯಿಯವರ ಹೆಸರಿನಲ್ಲಿ ಸರ್ಕಾರಿ ಭೂಮಿ ಪಡೆದುಕೊಂಡಿದ್ದು, ಅದಕ್ಕೆ ಪೋಡಿ ಮಾಡಿಕೊಡಲು ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ವರದಿ ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸೂಚನೆ ನೀಡಿದ್ದರು. ಅದರಂತೆ, ಬೆಂಗಳೂರು ದಕ್ಷಿಣ ವಿಭಾಗದ ಎ.ಸಿ. ನಟೇಶ್ ಅವರು, ಪರಿಶೀಲನೆ ನಡೆಸಿ, ಎಲ್ಲವೂ ಕ್ರಮಬದ್ಧವಾಗಿದೆ ಎಂದು ವರದಿ ನೀಡಿದ್ದಾರೆನ್ನಲಾಗಿದೆ.

ವರದಿಯನ್ನಾಧರಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರು ಹೇಳಿದ್ದರು. ಮಂಜೂರಿದಾರರಿಂದ ತಾರಾಬಾಯಿಯವರು ಭೂಮಿ ಖರೀದಿಸಿದ್ದು, ಎಲ್ಲವೂ ಕ್ರಮಬದ್ಧವಾಗಿವೆ ಎಂದು ಎ.ಸಿ. ವರದಿ ನೀಡಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...