alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳಗಾವಿ ಗುಂಪು ಘರ್ಷಣೆ, ಕಲ್ಲುತೂರಾಟ; 15 ಜನರ ಬಂಧನ

ಬೆಳಗಾವಿ: ಗಣೇಶ ವಿಸರ್ಜನೆ ಅದ್ದೂರಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಆರಂಭವಾದ ಘರ್ಷಣೆ, ಕಲ್ಲು ತೂರಾಟಕ್ಕೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಜನರನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಗಡಿ ಜಿಲ್ಲೆ ಬೆಳಗಾವಿಯ ಶಿವಾಜಿನಗರ ಹಾಗೂ ವೀರಭದ್ರ ನಗರದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಆರಂಭವಾಗಿತ್ತು. ಈ ವೇಳೆ ಕೆಲ ದುಷ್ಕರ್ಮಿಗಳು ಜನರು, ವಾಹನ, ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದರು. ಘಟನೆಯಲ್ಲಿ ಪೊಲೀಸ್ ಪೇದೆ ಸೇರಿದಂತೆ 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಈ ಸಂಬಂಧ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 15 ಜನರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...