alex Certify
ಕನ್ನಡ ದುನಿಯಾ       Mobile App
       

Kannada Duniya

ನಾಡ ಪಿಸ್ತೂಲ್ ಹೊಂದಿದ್ದ ರೌಡಿ ಶೀಟರ್ ಅರೆಸ್ಟ್

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಶಿರಡೋನ ಚೆಕ್ ಪೋಸ್ಟ್ ಬಳಿ ಅಕ್ರಮವಾಗಿ ಪಿಸ್ತೂಲ್ ಸಾಗಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇಂಡಿ ತಾಲ್ಲೂಕು ನಿವರಗಿ ಗ್ರಾಮದ ರೌಡಿಶೀಟರ್ ಸುನಿಲ್ ವಾಮನ ಬೋಸ್ಲೆ(32) ಬಂಧಿತ ಆರೋಪಿ. ಚೆಕ್ ಪೋಸ್ಟ್ ನಲ್ಲಿ ತಪಾಸಣೆಯ ವೇಳೆ ಸುನಿಲ್ ಬಳಿ 1 ನಾಡ ಪಿಸ್ತೂಲ್, 3 ಜೀವಂತ ಗುಂಡುಗಳು ಕಂಡು ಬಂದಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಚಡಚಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸುನಿಲ್ ವಿರುದ್ಧ ಚಡಚಣ, ಇಂಡಿ, ಝಳಕಿ ಪೊಲೀಸ್ ಠಾಣೆ ಹಾಗೂ ಮಹಾರಾಷ್ಟ್ರದ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...