alex Certify
ಕನ್ನಡ ದುನಿಯಾ       Mobile App
       

Kannada Duniya

ಚಳಿ, ಮಳೆಗೆ ಜಗ್ಗದೇ ಆಶಾ ಕಾರ್ಯಕರ್ತೆಯರ ಹೋರಾಟ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹೋರಾಟದ ನಂತರ, ಆಶಾ ಕಾರ್ಯರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಹೋರಾಟ ಕೈಗೊಂಡಿದ್ದಾರೆ.

ಫ್ರೀಡಂ ಪಾರ್ಕ್ ಮುಂಭಾಗದ ರಸ್ತೆಯಲ್ಲೇ ಹೋರಾಟ ನಡೆಸಿದ್ದಾರೆ. ಪುಟ್ಟ ಮಕ್ಕಳೊಂದಿಗೆ ಬಂದಿರುವ ಕಾರ್ಯಕರ್ತೆಯರು ಕೂಡ ರಾತ್ರಿ ಚಳಿ, ಗಾಳಿ ಮಳೆಯನ್ನು ಲೆಕ್ಕಿಸದೇ ಹೋರಾಟ ನಡೆಸಿದ್ದಾರೆ.

ರಾಜ್ಯದ ಮೂಲೆ ಮೂಲೆಗಳಿಂದ ಬಂದಿರುವ ಸಹಸ್ರಾರು ಸಂಖ್ಯೆಯ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಸುಮಾರು 15,000 ಕ್ಕೂ ಅಧಿಕ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ಬಳಿ ಬೀಡು ಬಿಟ್ಟಿದ್ದು, ಮೂಲ ಸೌಕರ್ಯಗಳ ಕೊರತೆ ಎದುರಾಗಿದೆ.

ಕಾನೂನು ಪ್ರಕಾರ ಆಶಾ ಕಾರ್ಯಕರ್ತೆಯರಿಗೆ 18,000 ರೂ. ವೇತನ ನೀಡಬೇಕಿದ್ದರೂ, ಕೇವಲ 3000 ರೂ. ವೇತನ ನೀಡಲಾಗುತ್ತಿದೆ. 6000 ರೂ. ವೇತನ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರೋತ್ಸಾಹಧನದೊಂದಿಗೆ ಇ.ಪಿ.ಎಫ್., ಇ.ಎಸ್.ಐ., ಪಿಂಚಣಿ ಸೌಲಭ್ಯ ಕೊಡಬೇಕು. ಬೇಡಿಕೆ ಈಡೇರಿಸುವವರೆಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...