alex Certify
ಕನ್ನಡ ದುನಿಯಾ       Mobile App
       

Kannada Duniya

ವಾಜಪೇಯಿಯವರ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ

“ಆಧುನಿಕ ಭಾರತ ಕಂಡ ಅಪರೂಪದ ಮೌಲಿಕ ರಾಜಕಾರಣಿ ವಾಜಪೇಯಿ; ಅಜಾತ ಶತ್ರು, ಅವರ ನಿಧನದಿಂದ ಅತೀವ ದುಃಖವಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ವಾಜಪೇಯಿ ಅವರ ನಿಧನದ ಹಿನ್ನೆಲೆಯಲ್ಲಿ ಶೋಕ ಸಂದೇಶ ಕಳುಹಿಸಿರುವ ಅವರು “ಸೋಲನ್ನೆಂದೂ ಒಪ್ಪಲಾರೆ, ಹೊಸ ಸವಾಲುಗಳಿಗೆಂದೂ ಹೆದರಲಾರೆ” ಎನ್ನುವ ಅವರ ಕವನದ ಸಾಲು ವಾಜಪೇಯಿಯವರ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿ ಎಂದು ಹೇಳಿದ್ದಾರೆ.

ವಾಜಪೇಯಿಯವರು ಭ್ರಾತೃತ್ವ ಮತ್ತು ಸಹಬಾಳ್ವೆಯಲ್ಲಿ ಅಪರಿಮಿತ ನಂಬಿಕೆ ಇಟ್ಟವರು. ಅವರೊಬ್ಬ ಅತ್ಯುತ್ತಮ ವಾಗ್ಮಿ ಮತ್ತು ಆದರ್ಶ ಸಂಸದೀಯ ಪಟುವಾಗಿದ್ದರು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಸುಧಾರಣೆಗೆ ಅವರು ಮಾಡಿದ ಪ್ರಯತ್ನಗಳು ಶ್ಲಾಘನೀಯ. ವೈಯಕ್ತಿಕವಾಗಿ ನಾನು ಅವರನ್ನು ಭೇಟಿ ಮಾಡಿದ್ದೆ. ಅವರ ಸೌಜನ್ಯ ನಮಗೆಲ್ಲರಿಗೂ ಆದರ್ಶ ಎಂದಿರುವ ಮುಖ್ಯಮಂತ್ರಿಗಳು, ಅವರ ನಿಧನದಿಂದ ದೇಶ ಒಬ್ಬ ದಾರ್ಶನಿಕ ವ್ಯಕ್ತಿತ್ವದ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...