alex Certify
ಕನ್ನಡ ದುನಿಯಾ       Mobile App
       

Kannada Duniya

ಹಣ ತುಂಬಿದ್ದ ಎಟಿಎಂ ಯಂತ್ರವನ್ನೇ ಹೊತ್ತೊಯ್ದ ಕಳ್ಳರು

indicashಹಣ ತುಂಬಿದ್ದ ಎಟಿಎಂ ಯಂತ್ರವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಕೊಪ್ಪಳ ಜಿಲ್ಲೆ ಕಾರಟಗಿಯ ಸಾಲುಂಚಿಮರದಲ್ಲಿ ಕಳೆದ ರಾತ್ರಿ ನಡೆದಿದೆ.

ಟಾಟಾ ಇಂಡಿಕ್ಯಾಶ್ ಎಟಿಎಂ ಯಂತ್ರವನ್ನು ಕಳ್ಳರು ಕದ್ದೊಯ್ದಿದ್ದು, ಯಾವುದೇ ಭದ್ರತಾ ಸಿಬ್ಬಂದಿಯನ್ನು ಈ ಎಟಿಎಂ ಯಂತ್ರದ ಬಳಿ ನಿಯೋಜಿಸಿರಲಿಲ್ಲವೆಂದು ಹೇಳಲಾಗಿದೆ. ಇದೇ ಸಮಯ ಸಾಧಿಸಿದ ದುಷ್ಕರ್ಮಿಗಳು ಹಣ ತುಂಬಿದ್ದ ಎಟಿಎಂ ಯಂತ್ರವನ್ನೇ ಹೊತ್ತೊಯ್ದಿದ್ದಾರೆ.

ಈ ಎಟಿಎಂ ಯಂತ್ರವಿದ್ದ ಮಳಿಗೆ ಪಕ್ಕದಲ್ಲಿ ಅಂಗಡಿಯೊಂದು ಇತ್ತೆಂದು ಹೇಳಲಾಗಿದ್ದು, ಕೆಲ ದಿನಗಳ ಹಿಂದಷ್ಟೇ ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ ಎಂಬ ಕಾರಣಕ್ಕೆ ಪೊಲೀಸರು ತೆರವುಗೊಳಿಸಿದ್ದರೆಂದು ಹೇಳಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕಾರಟಗಿ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...