alex Certify
ಕನ್ನಡ ದುನಿಯಾ       Mobile App
       

Kannada Duniya

ಎ.ಟಿ.ಎಂ. ದಾಳಿಕೋರನ ವಶಕ್ಕೆ ಪಡೆಯಲು ಮನವಿ

woman-at

ಬೆಂಗಳೂರು: ಬೆಂಗಳೂರಿನ ಎ.ಟಿ.ಎಂ.ನಲ್ಲಿ ಮಹಿಳೆಯೊಬ್ಬರ ಮೇಲೆ, ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪಿ 3 ವರ್ಷಗಳ ಬಳಿಕ ಸೆರೆ ಸಿಕ್ಕಿದ್ದಾನೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪೊಲೀಸರು ಮಧುಕರ್ ರೆಡ್ಡಿ ಎಂಬುವನನ್ನು ಬಂಧಿಸಿದ್ದು, ವಿಚಾರಣೆ ಸಂದರ್ಭದಲ್ಲಿ ಬೆಂಗಳೂರು ಕಾರ್ಪೊರೇಷನ್ ಬ್ಯಾಂಕ್ ಎ.ಟಿ.ಎಂ.ನಲ್ಲಿ ಜ್ಯೋತಿ ಉದಯ್ ಅವರ ಮೇಲೆ ಹಲ್ಲೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ.

2013 ರ ನವೆಂಬರ್ 11 ರಿಂದ ಈತನ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದರು. ಬಂಧಿತ ಮಧುಕರ್ ರೆಡ್ಡಿ 4 ಕೊಲೆ, 2 ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ.

ಈತನನ್ನು ಚಿತ್ತೂರು ಜಿಲ್ಲಾ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದ್ದು, ವಿಚಾರಣೆಗಾಗಿ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆಯಲು ಕರ್ನಾಟಕ ಪೊಲೀಸರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...