alex Certify
ಕನ್ನಡ ದುನಿಯಾ       Mobile App
       

Kannada Duniya

ಎಟಿಎಂ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ರಾಜಧಾನಿ ಬೆಂಗಳೂರಿನಲ್ಲಿ ಎಟಿಎಂ ಗೆ ಹಣ ತುಂಬುವ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಲ್ಲದೇ ಓರ್ವನಿಗೆ ಚಾಕುವಿನಿಂದ ಇರಿದು ಸುಮಾರು 18 ಲಕ್ಷ ರೂ. ದೋಚಿ ಪರಾರಿಯಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ದರೋಡೆಕೋರರಿಂದ ಚಾಕು ಇರಿತಕ್ಕೊಳಗಾಗಿದ್ದ ಸಾಗರ್ ಎಂಬಾತನೇ ಎಟಿಎಂ ಗೆ ಹಣ ತುಂಬಲು ಹೋಗುವ ಮಾಹಿತಿಯನ್ನು ತನ್ನ ಸ್ನೇಹಿತರಿಗೆ ನೀಡಿ ಈ ದರೋಡೆ ಮಾಡಿಸಿದ್ದನೆಂಬ ಅಂಶ ಬಯಲಾಗಿದ್ದು, ತನ್ನ ಮೇಲೆ ಪೊಲೀಸರಿಗೆ ಅನುಮಾನ ಬಾರದಿರಲೆಂಬ ಕಾರಣಕ್ಕೆ ಸಾಗರ್ ತನಗೆ ಚಾಕುವಿನಿಂದ ತಿವಿಯಲು ತನ್ನ ಸ್ನೇಹಿತರಿಗೆ ಸೂಚಿಸಿದ್ದನೆಂಬ ಮಾಹಿತಿ ಲಭ್ಯವಾಗಿದೆ.

ಸಾಗರ್ ಗೆ ಚಾಕುವಿನಿಂದ ಇರಿದು ಹಣ ದೋಚಿಕೊಂಡು ಪರಾರಿಯಾಗಿದ್ದ ಆತನ ಸ್ನೇಹಿತರು ಮಂಡ್ಯದ ಬಾರ್ ಒಂದರಲ್ಲಿ ಮದ್ಯಪಾನ ಮಾಡಿ ಗಲಾಟೆ ಮಾಡಿದ್ದು, ಇವರ ಬಳಿಯಿದ್ದ ಬ್ಯಾಗ್ ನ ತುಂಬ ಹಣವಿರುವುದನ್ನು ಕಂಡಿದ್ದ ಸಾರ್ವಜನಿಕರೊಬ್ಬರು ಖೋಟಾ ನೋಟು ಇರಬಹುದೆಂದು ಭಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದೇ ಆರೋಪಿಗಳ ಬಂಧನಕ್ಕೆ ಕಾರಣವಾಗಿದೆ. ಅವರುಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರಿಗೆ ದರೋಡೆ ಹಿಂದಿನ ಅಸಲಿಯತ್ತು ತಿಳಿದುಬಂದಿದೆ.

ಚಾಕು ಇರಿತಕ್ಕೊಳಗಾಗಿದ್ದ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಆರೋಪಿಗಳ ಪೈಕಿ ಇಬ್ಬರು ಪರಾರಿಯಾಗಿದ್ದಾರೆನ್ನಲಾಗಿದ್ದು, ಅವರುಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಅಕ್ಟೋಬರ್ 30 ರಂದು ಬೆಳಿಗ್ಗೆ ಸೆಕ್ಯೂರ್ ವೆಲ್ ಏಜೆನ್ಸಿಯ ಮೋಹನ್, ಸಾಗರ್ ಹಾಗೂ ಪ್ರಸನ್ನ ಅವರು ಜಾಲಹಳ್ಳಿ ಕ್ರಾಸ್ ಬಳಿಯ ಐ.ಸಿ.ಐ.ಸಿ.ಐ ಬ್ಯಾಂಕ್ ಗೆ ಸೇರಿದ ಎ.ಟಿ.ಎಂ.ಗೆ ಹಣ ತುಂಬಲು ಬಂದಾಗ, ಹೆಲ್ಮೆಟ್ ಧರಿಸಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ದಾಳಿ ಮಾಡಿದ್ದರಲ್ಲದೇ ಸಾಗರ್ ಗೆ ಚಾಕುವಿನಿಂದ ಇರಿದು 18 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಬಾಗಲಗುಂಟೆ ಠಾಣೆ ಪೊಲೀಸರು ತನಿಖೆ ಕೈಗೊಂಡ ಸಂದರ್ಭದಲ್ಲೇ ಕುಡಿದ ಮತ್ತಿನಲ್ಲಿ ಆರೋಪಿಗಳು ಮಾಡಿದ ಯಡವಟ್ಟು ಬಂಧನಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...