alex Certify
ಕನ್ನಡ ದುನಿಯಾ       Mobile App
       

Kannada Duniya

ತಹಸೀಲ್ದಾರ್ ಮೇಲೆ ಹಲ್ಲೆ: ಹಲವು ನಿರಾಶ್ರಿತರ ಬಂಧನ

ಕೊಡಗು: ಕುಶಾಲನಗರದ ನಿರಾಶ್ರಿತ ಕೇಂದ್ರದಲ್ಲಿ ತಹಶೀಲ್ದಾರ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಕ್ಕೂ ಹೆಚ್ಚು ನಿರಾಶ್ರಿತರನ್ನು ಪೊಲೀಸರು ಬಂಧಿಸಿದ್ದಾರೆ.

ಭೀಕರ ಜಲಪ್ರವಾಹಕ್ಕೆ ತುತ್ತಾಗಿ ಮನೆ-ಮಠ ಕಳೆದುಕೊಂಡು ಕುಶಾಲನಗರದ ವಾಲ್ಮೀಕಿ ಭವನದ ನಿರಾಶ್ರಿತ ಕೇಂದ್ರ ಸೇರಿರುವ ಸಾವಿರಾರು ಜನರಿಗೆ ಊಟದ ವ್ಯವಸ್ಥೆ, ಶೌಚಾಲಯ ಸೇರಿದಂತೆ ಸೂಕ್ತ ಸೌಲಭ್ಯ ಕೂಡ ಇಲ್ಲದಾಗಿದೆ. ಇದರಿಂದ ಬೇಸತ್ತ ಸಂತ್ರಸ್ತ ನಿರಾಶ್ರಿತರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ನಿರತರ ಸ್ಥಳಕ್ಕೆ ಭೇಟಿ ನೀಡಿದ್ದ ತಹಶೀಲ್ದಾರ್ ಮಹೇಶ್ ಹಾಗೂ ಪ್ರತಿಭಟನಾ ನಿರತರ ನಡುವೆ ಮಾತಿಗೆ ಮಾತು ಬೆಳೆದು, ರೊಚ್ಚಿಗೆದ್ದ ನಿರಾಶ್ರಿತರು ಹಲ್ಲೆ ನಡೆಸಿದ್ದರು. ಈ ವೇಳೆ ನಡೆದ ಕಲ್ಲುತೂರಾಟದ ವೇಳೆ ನಿರಾಶ್ರಿತರಲ್ಲಿ ಹಲವರು ಗಾಯಗೊಂಡಿದ್ದರು.

ಈ ಪ್ರಕರಣ ಸಂಬಂಧ ಎರಡೂ ಕಡೆಗಳಿಂದ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಮುಂಜಾನೆ ನಿರಾಶ್ರಿತ ಕೇಂದ್ರಕ್ಕೆ ತೆರಳಿದ ಪೊಲೀಸರು, 15ಕ್ಕೂ ಹೆಚ್ಚು ನಿರಾಶ್ರಿತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನಿರಾಶ್ರಿತ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸದೇ ನಿರ್ಲಕ್ಷ ವಹಿಸಿದ್ದ ತಹಶೀಲ್ದಾರ್ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ಸಂತ್ರಸ್ತರನ್ನೆ ಪೊಲೀಸರು ವಶಕ್ಕೆ ಪಡೆದುಕೊಂಡು ಕ್ರಮಕ್ಕೆ ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...