alex Certify
ಕನ್ನಡ ದುನಿಯಾ       Mobile App
       

Kannada Duniya

ಅಕ್ರಮ ಮರಳು ದಂಧೆ ನಡೆಸುತ್ತಿದ್ದವರ ವಿರುದ್ಧ ದೂರು ನೀಡಿದ್ದಕ್ಕೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

ತುಮಕೂರು: ಅಕ್ರಮ ಮರಳುದಂಧೆ ನಡೆಸುತ್ತಿದ್ದವರ ವಿರುದ್ಧ ಕುಟುಂಬವೊಂದು ದೂರು ನೀಡಿದ ಹಿನ್ನಲೆಯಲ್ಲಿ ದುಷ್ಕರ್ಮಿಗಳು ಕುಟುಂಬದ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿಯಲ್ಲಿ ನಡೆದಿದೆ.

ಇಲ್ಲಿನ ಮಹಾಲಿಂಗಪ್ಪ ಹಾಗೂ ಕುಟುಂಬದವರು ಹಲ್ಲೆಗೊಳಗಾದ ವ್ಯಕ್ತಿಗಳು. ಅಕ್ರಮ ಮರಳುದಂಧೆಕೋರರಾದ ಜಯಣ್ಣ, ಪುಟ್ಟಸ್ವಾಮಿ, ಬಸವರಾಜು, ವೀಣಾ ಅವರ ಗುಂಪು ದೂರುದಾರರ ಮೇಲೆ ಕಬ್ಬಿಣದ ರಾಡ್, ಕಲ್ಲು ಮತ್ತು ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ. ಶಂಕರಪ್ಪ, ಶಾಂತಮ್ಮ, ಮತ್ತು ಹೊನ್ನರಾಜು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಿಪಟೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...