alex Certify
ಕನ್ನಡ ದುನಿಯಾ       Mobile App
       

Kannada Duniya

ಪೋಷಕ ನಟಿ ಪ್ರಶಸ್ತಿ ಸ್ವೀಕರಿಸುವುದಿಲ್ಲವೆಂದ ಜಯಶ್ರೀ

b jayashree

ಬೆಂಗಳೂರು: 2014ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆಯಾದ ಬೆನ್ನಲ್ಲೇ ಅಸಮಾಧಾನ ಸ್ಪೋಟಗೊಂಡಿದೆ. ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಪಾತ್ರರಾಗಿರುವ ನಟಿ ಬಿ. ಜಯಶ್ರೀ ತಾವು ಪ್ರಶಸ್ತಿ ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ಕೌದಿ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅವರಿಗೆ ಪ್ರಶಸ್ತಿ ಬಂದಿತ್ತು. ಈ ಚಿತ್ರದಲ್ಲಿ ಅವರು ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು. ಪ್ರಮುಖ ಪಾತ್ರಧಾರಿಯಾಗಿ ಅಭಿನಯಿಸಿದವರಿಗೆ ಪೋಷಕ ಪ್ರಶಸ್ತಿ ನೀಡಿರುವುದು ಸರಿಯಲ್ಲ ಎಂಬ ಆರೋಪ ಕೇಳಿಬಂದಿವೆ. ‘ಕೌದಿ’ ನಿರ್ದೇಶಕ ರವೀಂದ್ರನಾಥ್ ಸಿರಿವರ, ತಮ್ಮ ಚಿತ್ರದಲ್ಲಿ ಜಯಶ್ರೀ ಮುಖ್ಯಪಾತ್ರದಲ್ಲಿ ನಾಯಕಿಯಾಗಿದ್ದಾರೆ. ಅವರಿಗೆ ಪೋಷಕ ನಟಿ ವಿಭಾಗದಲ್ಲಿ ಪ್ರಶಸ್ತಿಯನ್ನು ಕೊಟ್ಟಿರುವುದು ಯಾವ ಮಾನದಂಡದ ಮೇಲೆ ಎಂದು ಪ್ರಶ್ನಿಸಿದ್ದಾರೆ.

ನಟಿ ಬಿ. ಜಯಶ್ರೀ ಕೂಡ, ನಾನು ಪೋಷಕ ನಟಿಯಾಗಿ ನಟಿಸಿಲ್ಲ. ಅದು, ಪೋಷಕ ನಟರಿಗೆ ಸಲ್ಲಬೇಕಾದ ಪ್ರಶಸ್ತಿ ಆಗಿರುವುದರಿಂದ ಅವರಿಗೂ ಅನ್ಯಾಯ ಮಾಡಿದಂತಾಗುತ್ತದೆ. ಪಾತ್ರಕ್ಕೂ ಅನ್ಯಾಯವಾಗುತ್ತದೆ. ಹಾಗಾಗಿ ನಾನು ಪ್ರಶಸ್ತಿ ಸ್ವೀಕರಿಸಲ್ಲ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...