alex Certify
ಕನ್ನಡ ದುನಿಯಾ       Mobile App
       

Kannada Duniya

ಅತೃಪ್ತರ ಸಮಾಧಾನಪಡಿಸಲು ಬಿ.ಎಸ್.ವೈ. ಯತ್ನ

bsy-bjp-bn

ಬೆಂಗಳೂರು: ಪಕ್ಷದ ಕೆಲವು ಮುಖಂಡರಿಗೆ ನೀಡಿದ್ದ ನೋಟಿಸ್ ವಾಪಸ್ ಪಡೆಯಲು ಹಾಗೂ ಅಮಾನತು ಆದೇಶ ಹಿಂಪಡೆಯಲು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ.

ಅತೃಪ್ತ ನಾಯಕರನ್ನು ಸಮಾಧಾನಪಡಿಸಲು ಅವರು ಕ್ರಮ ಕೈಗೊಂಡಿದ್ದಾರೆ. ಮಾಜಿ ಮೇಯರ್ ವೆಂಕಟೇಶ ಮೂರ್ತಿ ಅವರ ಅಮಾನತು ಆದೇಶವನ್ನು ಹಿಂಪಡೆಯುವಂತೆ ಬೆಂಗಳೂರು ನಗರ ಬಿಜೆಪಿ ಅಧ್ಯಕ್ಷರಿಗೆ ಸೂಚನೆ ನೀಡಿದ್ದಾರೆ.

ಅದೇ ರೀತಿ ಮಾಜಿ ಸಚಿವ ಸೊಗಡು ಶಿವಣ್ಣ ಮತ್ತು ಮುಖಂಡ ನಂದೀಶ್ ಅವರಿಗೆ ನೀಡಿದ್ದ ನೋಟಿಸ್ ವಾಪಸ್ ಪಡೆಯಲು ತೀರ್ಮಾನಿಸಿದ್ದು, ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತೆ ಪತ್ರ ಬರೆದಿದ್ದಾರೆ. ಅಲ್ಲದೇ, ಪಕ್ಷದ ಸಭೆಯಲ್ಲಿ ಭಾಗವಹಿಸುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...