alex Certify
ಕನ್ನಡ ದುನಿಯಾ       Mobile App
       

Kannada Duniya

ಬಯಲಾಯ್ತು BSY ವಿರುದ್ಧದ ಸುಳ್ಳು ಕೇಸಿನ ರಹಸ್ಯ

bsy-dnoti

ಬೆಂಗಳೂರು: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ಕಾಂಗ್ರೆಸ್ ಆಡಳಿತದ ರಾಜ್ಯ ಸರ್ಕಾರ ಸೇಡಿನ ರಾಜಕಾರಣ ನಡೆಸುತ್ತಿದೆ ಎಂಬ ಆರೋಪಗಳಿಗೆ ಪುಷ್ಠಿ ನೀಡುವಂತಹ ಪ್ರಕರಣ ಬೆಳಕಿಗೆ ಬಂದಿದೆ.

ಶಿವರಾಮ ಕಾರಂತ ಬಡಾವಣೆ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರ ವಿರುದ್ಧ ಭ್ರಷ್ಟಾಚಾರ ನಿಗ್ರಹದಳ ಕೇಸ್ ದಾಖಲಿಸಿದೆ.

ಈ ಪ್ರಕರಣದಲ್ಲಿ ಅಂದು ಭೂಸ್ವಾಧೀನಾಧಿಕಾರಿಯಾಗಿದ್ದ ಬಸವರಾಜೇಂದ್ರ ಅವರಿಗೆ ಎ.ಸಿ.ಬಿ. ಅಧಿಕಾರಿಗಳಿಬ್ಬರು ಒತ್ತಡ ಹಾಕಿದ್ದಾರೆ.

ಪ್ರಸ್ತುತ ಬಸವರಾಜೇಂದ್ರ ಗಣಿ ತನಿಖಾ ಕೋಶ ಮತ್ತು ಸಕ್ಕರೆ ಉಪಕಾರ್ಯದರ್ಶಿಯಾಗಿದ್ದು, ಅವರನ್ನು ವಿಚಾರಣೆಗೆ ಕರೆಸಿಕೊಂಡ ಎ.ಸಿ.ಬಿ. ಅಧಿಕಾರಿಗಳು, ಯಡಿಯೂರಪ್ಪನವರ ವಿರುದ್ಧ ಹೇಳಿಕೆ ನೀಡದಿದ್ದರೆ, ನಿಮ್ಮನ್ನು ತಪ್ಪಿತಸ್ಥರನ್ನಾಗಿ ಮಾಡಲಾಗುವುದು. ಬಡ್ತಿಯನ್ನು ತಡೆ ಹಿಡಿಯಲಾಗುವುದು ಎಂದು ಬೆದರಿಸಿದ್ದಾರೆ ಎನ್ನಲಾಗಿದೆ.

ಇದೆಲ್ಲವನ್ನು ವಿವರವಾಗಿ ಬರೆದಿರುವ ಪತ್ರವನ್ನು ಬಸವರಾಜೇಂದ್ರ ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಯಡಿಯೂರಪ್ಪನವರ ವಿರುದ್ಧ ಹೇಳಿಕೆ ನೀಡದ ಕಾರಣ ತಮ್ಮನ್ನು ಪ್ರಕರಣದ 2 ನೇ ಆರೋಪಿಯಾಗಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...