alex Certify
ಕನ್ನಡ ದುನಿಯಾ       Mobile App
       

Kannada Duniya

ಭದ್ರಾವತಿಯಿಂದ ಬಿ.ಎಸ್.ವೈ. ಸ್ಪರ್ಧೆ..?

bsy-bsy

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಈಗಿನಿಂದಲೇ ಕಾರ್ಯೋನ್ಮುಖರಾಗಿರುವ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕ್ಷೇತ್ರ ಬದಲಿಸಲಿದ್ದಾರೆ ಎನ್ನಲಾಗಿದೆ.

ಶಿಕಾರಿಪುರ ಕ್ಷೇತ್ರದಲ್ಲಿ 6 ಬಾರಿ ಜಯಗಳಿಸಿದ್ದ ಯಡಿಯೂರಪ್ಪ ಸದ್ಯ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಸದಸ್ಯರಾಗಿದ್ದಾರೆ.

ಅವರ ಪುತ್ರ ಬಿ.ವೈ. ರಾಘವೇಂದ್ರ ಶಿಕಾರಿಪುರ ಶಾಸಕರಾಗಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಘವೇಂದ್ರ ಶಿಕಾರಿಪುರದಿಂದಲೇ ಕಣಕ್ಕೆ ಇಳಿಯಲಿದ್ದಾರೆ. ಪುತ್ರನಿಗೆ ಕ್ಷೇತ್ರ ಬಿಟ್ಟು ಕೊಡಲು ನಿರ್ಧರಿಸಿರುವ ಯಡಿಯೂರಪ್ಪ ಸೂಕ್ತವೆನಿಸುವ ಕ್ಷೇತ್ರವನ್ನು ಹುಡುಕಾಡುತ್ತಿದ್ದಾರೆ.

 

ಬೆಂಗಳೂರಿನ 2 ಕ್ಷೇತ್ರಗಳು ಮತ್ತು ಉತ್ತರ ಕರ್ನಾಟಕದ ಯಾವ ಕ್ಷೇತ್ರ ಸೂಕ್ತ ಎಂಬುದರ ಕುರಿತು ಖಾಸಗಿ ಸಂಸ್ಥೆಯಿಂದ ಸಮೀಕ್ಷೆ ನಡೆಸಿ ಮಾಹಿತಿ ಪಡೆದುಕೊಂಡಿರುವ ಬಿ.ಎಸ್.ವೈ., ಸೂಕ್ತವೆನಿಸಿದ್ದರಿಂದ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಿಂದ ಕಣಕ್ಕಿಳಿಯಲು ಯೋಚಿಸಿದ್ದಾರೆ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆ ಭದ್ರಾವತಿಯ ಬಿ.ಜೆ.ಪಿ. ಮುಖಂಡರು, ಭದ್ರಾವತಿಯಿಂದಲೇ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ. ಈ ನಡುವೆ ಕುಮಾರ್ ಬಂಗಾರಪ್ಪ ಬಿ.ಜೆ.ಪಿ. ಸೇರುವ ಮಾತುಗಳು ಕೇಳಿ ಬರುತ್ತಿದ್ದು, ಅವರು ಬಂದರೆ, ಸೊರಬ ಕ್ಷೇತ್ರವನ್ನು ಬಿಟ್ಟುಕೊಡಬೇಕಾಗುತ್ತದೆ.

ಮಾಜಿ ಸಚಿವ ಹರತಾಳು ಹಾಲಪ್ಪ ಸೊರಬ ಬದಲಿಗೆ ಸಾಗರದಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಬೇಳೂರು ಗೋಪಾಲಕೃಷ್ಣ ಒಪ್ಪುವ ಸಾಧ್ಯತೆ ಇಲ್ಲ. ಬೇಳೂರು ಸಾಗರದಿಂದಲೇ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ.

ಇದರಿಂದ ಗೊಂದಲವಾಗುವ ಸಾಧ್ಯತೆ ಇರುವುದರಿಂದ ಕುಮಾರ್ ಬಂಗಾರಪ್ಪ ಅವರು ಪಕ್ಷಕ್ಕೆ ಬಂದರೆ, ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸುವ ಚಿಂತನೆ ಇದೆ. ಶಿಕಾರಿಪುರದಿಂದ ಬಿ.ವೈ. ರಾಘವೇಂದ್ರ, ಭದ್ರಾವತಿಯಿಂದ ಯಡಿಯೂರಪ್ಪ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...