alex Certify
ಕನ್ನಡ ದುನಿಯಾ       Mobile App
       

Kannada Duniya

ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಬಿ.ಎಸ್.ವೈ.

bsy-mon

ಬೆಂಗಳೂರು: ರಾಜ್ಯ ಬಿ.ಜೆ.ಪಿ. ಹಿರಿಯ ನಾಯಕರಾದ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ಅವರ ನಡುವಿನ ಮುಸುಕಿನ ಗುದ್ದಾಟ ತಾರಕಕ್ಕೇರಿದೆ.

ಇದರ ಬೆನ್ನಲ್ಲೇ, 24 ಮಂದಿ ಹಿರಿಯ ನಾಯಕರು ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದು, ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಬಹಿರಂಗಪಡಿಸಿತ್ತು.

ಪದಾಧಿಕಾರಿಗಳ ಪಟ್ಟಿಯನ್ನು ಪುನರ್ ಪರಿಶೀಲಿಸಬೇಕು. ಈಶ್ವರಪ್ಪನವರ ಬಗ್ಗೆ ಅಗೌರವ ತೋರಿದ್ದನ್ನು ಸರಿಪಡಿಸಬೇಕು. ಕೆಲವು ನಾಯಕರಿಗೆ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕು ಹಾಗೂ ಕೆಲ ಮುಖಂಡರ ಅಮಾನತು ಆದೇಶ ಹಿಂಪಡೆಯಬೇಕೆಂದು ಪತ್ರದಲ್ಲಿ ತಿಳಿಸಲಾಗಿತ್ತು.

ಇದಕ್ಕೆ ಕೇರ್ ಮಾಡದ ಯಡಿಯೂರಪ್ಪ, ಪದಾಧಿಕಾರಿಗಳ ಪಟ್ಟಿಯನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಬೇಕಾದರೆ, ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಚರ್ಚಿಸಲಿ ಎಂದು ಹೇಳಿದ್ದರು.

ಆದರೆ, ಪಕ್ಷಕ್ಕೆ ಇದರಿಂದ ಡ್ಯಾಮೇಜ್ ಆಗುತ್ತದೆ ಎಂಬುದನ್ನು ಮನಗಂಡಿರುವ ಅವರು, ಜನವರಿ 19 ರಂದು ಪಕ್ಷದ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆ ಕರೆದಿದ್ದಾರೆ.

ಸಭೆಗೆ ಪತ್ರ ಬರೆದಿರುವ ಮುಖಂಡರಿಗೆ ಆಹ್ವಾನ ನೀಡಿದ್ದು, ಪತ್ರದಲ್ಲಿ ಪ್ರಸ್ತಾಪಿಸಿರುವ ವಿಷಯಗಳ ಕುರಿತಾಗಿ ಅವರೊಂದಿಗೆ ಚರ್ಚಿಸಿ, ಮುಂದಿನ ಕಾರ್ಯಕಾರಿಣಿಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

ಈ ಕುರಿತಾಗಿ ಮಾಹಿತಿ ನೀಡಿದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಜನವರಿ 19 ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸಭೆ ನಡೆಯಲಿದೆ. ಮುಖಂಡರು ಬರೆದಿದ್ದಾರೆ ಎನ್ನಲಾದ ಪತ್ರ ಇನ್ನೂ ನನ್ನ ಕೈ ಸೇರಿಲ್ಲ. ಆದರೂ ಅವರು ಪ್ರಸ್ತಾಪಿಸಿರುವ ವಿಚಾರಗಳ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...