alex Certify
ಕನ್ನಡ ದುನಿಯಾ       Mobile App
       

Kannada Duniya

‘ಈಶ್ವರಪ್ಪ, ನಾನು ಅಣ್ಣ-ತಮ್ಮಂದಿರಿದ್ದಂತೆ’

bsy-s

ಬಾಗಲಕೋಟೆ: ನಾನು ಮತ್ತು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ, ಅಣ್ಣ-ತಮ್ಮಂದಿರು ಇದ್ದಂತೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮತ್ತು ಈಶ್ವರಪ್ಪ ಅವರ ನಡುವೆ ಈಗ ಯಾವುದೇ ಗೊಂದಲವಿಲ್ಲ. ನಾವಿಬ್ಬರೂ ರಾಜ್ಯ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸುತ್ತೇವೆ ಎಂದು ತಿಳಿಸಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮಿಬ್ಬರ ಗುರಿಯಾಗಿದೆ. ನಮ್ಮಿಬ್ಬರ ನಡುವೆ ಅನಗತ್ಯ ಗೊಂದಲ ಸೃಷ್ಠಿಸಬೇಡಿ ಎಂದು ಹೇಳಿದ್ದಾರೆ.

ಮಾಜಿ ಸಚಿವ ಅಂಬರೀಶ್ ಬಿ.ಜೆ.ಪಿ. ಸೇರ್ಪಡೆ ಬಗ್ಗೆ ನನಗೆ ಮಾಹಿತಿ ಇಲ್ಲ. ಎಸ್.ಎಂ. ಕೃಷ್ಣ ಅವರು ಬಿ.ಜೆ.ಪಿ. ಸೇರುವ ಕುರಿತಾಗಿ ಯಾವ ಚರ್ಚೆ ನಡೆದಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಅಧಿವೇಶನದಲ್ಲಿ ಭಾಗವಹಿಸುವುದು ಎಲ್ಲಾ ಶಾಸಕರ ಕರ್ತವ್ಯ. ಕ್ಷೇತ್ರದ ಜನ ಅವರನ್ನು ಆಯ್ಕೆ ಮಾಡಿ ಕಳುಹಿಸಿರುತ್ತಾರೆ. ಭಾಗವಹಿಸದಿದ್ದರೆ, ಕ್ಷೇತ್ರದ ಜನರಿಗೆ ಅವಮಾನ ಮಾಡಿದಂತೆ. ಯಾವುದೇ ಪಕ್ಷದ ಶಾಸಕರಿರಲಿ ಸದನಕ್ಕೆ ಹಾಜರಾಗಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...