alex Certify
ಕನ್ನಡ ದುನಿಯಾ       Mobile App
       

Kannada Duniya

ಚಿಲ್ಲರೆ ವಿಷಯಗಳಿಗೆ ತಲೆ ಕೆಡಿಸಿಕೊಳ್ಳಲ್ಲ ಎಂದ ಬಿ.ಎಸ್.ವೈ.

b-sy-smg

ಶಿವಮೊಗ್ಗ:  ವಿಧಾನ ಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್ ವಿರುದ್ಧ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕಿಡಿಕಾರಿದ್ದಾರೆ.

ಬಿ.ಜೆ.ಪಿ. ರಾಜ್ಯ ಉಪಾಧ್ಯಕ್ಷರಾಗಿರುವ ಭಾನುಪ್ರಕಾಶ್ ಅವರು ಪತ್ರ ಬರೆದಿರುವ ಬಗ್ಗೆ, ಮಾಧ್ಯಮಗಳಿಗೆ ಹೇಳಿಕೆ ನೀಡಿರುವುದು ಸರಿಯಲ್ಲ. ಅಷ್ಟಕ್ಕೂ ಇದುವರೆಗೆ ಯಾವ ಪತ್ರವೂ ನನ್ನ ಕೈ ಸೇರಿಲ್ಲ ಎಂದು ಶಿವಮೊಗ್ಗದಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ವಿಷಯಗಳಿದ್ದರೂ, ನೇರವಾಗಿ ನನ್ನನ್ನು ಭೇಟಿ ಮಾಡಿ ಚರ್ಚಿಸಬಹುದಾಗಿದೆ. ನಾನು ಎಲ್ಲಿಯೇ ಇದ್ದರೂ ಎಲ್ಲರನ್ನೂ ಭೇಟಿ ಮಾಡುತ್ತೇನೆ. ಹೀಗಿದ್ದರೂ ಜವಾಬ್ದಾರಿಯುತ ಸ್ಥಾನದಲ್ಲಿರುವ ಭಾನುಪ್ರಕಾಶ್, ಮಾಧ್ಯಮಗಳಿಗೆ ಹೇಳಿಕೆ ನೀಡಿರುವುದು ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತದೆ ಎಂದು ಹೇಳಿದ್ದಾರೆ.

ನಾನು ಈಗಾಗಲೇ ಸ್ಪಷ್ಟನೆ ನೀಡಿರುವಂತೆ, ಪಕ್ಷದ ಪದಾಧಿಕಾರಿಗಳ ಪಟ್ಟಿಯನ್ನು ಯಾವುದೇ ಕಾರಣಕ್ಕೂ ಬದಲಿಸುವುದಿಲ್ಲ. ಬೇಕಾದರೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಲಿ ಎಂದು ಸಲಹೆ ನೀಡಿದ್ದಾರೆ.

ಯಾರೇ ಆಗಲಿ ಗೊಂದಲ ಮೂಡಿಸಬಾರದು. ಯಾರಿಗೆ ಅಸಮಾಧಾನವಿದ್ದರೂ ಪಕ್ಷದ ವೇದಿಕೆಯಲ್ಲಿಯೇ ಬಗೆಹರಿಸಿಕೊಳ್ಳಬಹುದಾಗಿದೆ ಎಂದಿದ್ದಾರೆ.

ರಾಜಕೀಯ ವಿರೋಧಿಗಳಿಗೆ ತಿರುಗೇಟು ನೀಡಿದ ಯಡಿಯೂರಪ್ಪ, ಚಿಲ್ಲರೆ ವಿಷಯಗಳ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ. ಬರದ ಸಮಸ್ಯೆ, ಉಪ ಚುನಾವಣೆ, ಶಿಕ್ಷಕರ ಕ್ಷೇತ್ರದ ಚುನಾವಣೆ ಮೊದಲಾದ ಪ್ರಮುಖ ವಿಷಯಗಳ ಬಗ್ಗೆ ಮಾತ್ರ ಗಮನಹರಿಸುತ್ತೇನೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...