alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಬಿ.ಎಸ್. ಯಡಿಯೂರಪ್ಪ?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ  ಹೆಚ್.ಡಿ. ಕುಮಾರಸ್ವಾಮಿ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ನಾಳೆ ವಿಧಾನಸಭಾ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಮೈತ್ರಿಕೂಟದ ಅಭ್ಯರ್ಥಿಯಾಗಿರುವ ರಮೇಶ್ ಕುಮಾರ್ ಸಭಾಪತಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ಮೈತ್ರಿಕೂಟದ ಸರ್ಕಾರವನ್ನು ಸಮರ್ಥವಾಗಿ ಎದುರಿಸಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ ನಾಯಕರು, ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನಾಗಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪರನ್ನು ಆಯ್ಕೆ ಮಾಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂಬರುವ ಲೋಕಸಭಾ ಚುನಾವಣೆಯವರೆಗೂ ಯಡಿಯೂರಪ್ಪನವರು ಪಕ್ಷದ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನವನ್ನು ನಿಭಾಯಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಇಂದು ಸಂಜೆ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ವಿಚಾರ ಅಂತಿಮಗೊಳ್ಳಲಿದೆ ಎಂದು ಹೇಳಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...