alex Certify
ಕನ್ನಡ ದುನಿಯಾ       Mobile App
       

Kannada Duniya

ಶಿಕಾರಿಪುರವಲ್ಲ, ಉತ್ತರ ಕರ್ನಾಟಕದಿಂದ ಬಿ.ಎಸ್.ವೈ. ಸ್ಪರ್ಧೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರ ಹಿಡಿಯಲು ರಾಜಕೀಯ ಪಕ್ಷಗಳು ಈಗಾಗಲೇ ಕಾರ್ಯತಂತ್ರ ರೂಪಿಸಿವೆ.

ಈಗಿನಿಂದಲೇ ಕಾರ್ಯೋನ್ಮುಖವಾಗಿರುವ ಪಕ್ಷದ ನಾಯಕರು ಅಧಿಕಾರ ಹಿಡಿಯಲು ಹೊಸ ಪ್ಲಾನ್ ಮಾಡತೊಡಗಿದ್ದಾರೆ.

ಈಗಾಗಲೇ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿದೆ.

ಪಕ್ಷದ ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಅವರೊಂದಿಗೆ ಚುನಾವಣಾ ಉಸ್ತುವಾರಿಗಳಾಗಿ ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಪಿಯೂಶ್ ಗೋಯಲ್ ಅವರನ್ನು ನಿಯೋಜಿಸಲಾಗಿದೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಪಣತೊಟ್ಟಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸಲು ಪ್ಲಾನ್ ಮಾಡಿದ್ದಾರೆ.

ಲಿಂಗಾಯತ ಮತಗಳನ್ನು ಸೆಳೆಯಲು ಯಡಿಯೂರಪ್ಪ ಅವರನ್ನು ಉತ್ತರ ಕರ್ನಾಟಕದ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತಿಸಿದ್ದಾರೆ.

ಶಿಕಾರಿಪುರ ಬದಲಿಗೆ ಉತ್ತರ ಕರ್ನಾಟಕ ಇಲ್ಲವೇ ಹೈದರಾಬಾದ್ ಕರ್ನಾಟಕದ ಕ್ಷೇತ್ರದಿಂದ ಬಿ.ಎಸ್.ವೈ. ಸ್ಪರ್ಧಿಸಲಿ ಎನ್ನುವುದು ಅಮಿತ್ ಶಾ ಚಿಂತನೆಯಾಗಿದೆ.

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಕಾಂಗ್ರೆಸ್, ಲಿಂಗಾಯತ ಮತಗಳನ್ನು ಸೆಳೆಯಲು ಮುಂದಾಗಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಪ್ರಾಬಲ್ಯ ಹೊಂದಿರುವ ಲಿಂಗಾಯತರನ್ನು ಸೆಳೆಯಲು ಯಡಿಯೂರಪ್ಪ ಉತ್ತರ ಕರ್ನಾಟಕದಿಂದಲೇ ಸ್ಪರ್ಧಿಸುವುದು ಸೂಕ್ತ ಎಂದು ಶಾ ಭಾವಿಸಿದಂತಿದೆ.

ಇದೇ ಕಾರಣಕ್ಕೆ ಅಮಿತ್ ಶಾ, ಶಿಕಾರಿಪುರದ ಬದಲಿಗೆ ಉತ್ತರ ಕರ್ನಾಟಕದಿಂದ ಕಣಕ್ಕಿಳಿಯುವಂತೆ ಸೂಚಿಸಿದ್ದು, ಇದಕ್ಕೆ ಯಡಿಯೂರಪ್ಪ ಒಲ್ಲದ ಮನಸಿನಿಂದಲೇ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...