alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪ ವಿರುದ್ಧ ದೂರು

ctd-bsy-man

ಮಂಡ್ಯ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಲಾಗಿದೆ.

ಮಂಡ್ಯ ಜಿಲ್ಲೆ ನಾಗಮಂಗಲದ ಕ್ರಾಂತಿ ಶಕ್ತಿ ಸಂಘಟನೆ ಪ್ರಧಾನ ಕಾರ್ಯದರ್ಶಿ ಡಿ. ವೆಂಕಟೇಶ್ ದೂರು ನೀಡಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ದಲಿತರ ಮನೆಯಲ್ಲಿ ಊಟ ಮಾಡುವುದಾಗಿ ಹೇಳಿದ್ದ ಯಡಿಯೂರಪ್ಪ, ಹೋಟೆಲ್ ನಿಂದ ತಿಂಡಿ ತರಿಸಿಕೊಂಡು ತಿನ್ನುವ ಮೂಲಕ ದಲಿತರಿಗೆ ಅವಮಾನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಯಡಿಯೂರಪ್ಪನವರ ಈ ನಡೆಯಿಂದ ದಲಿತ ಸಮುದಾಯಕ್ಕೆ ನೋವಾಗಿದೆ. ಇದು ದಲಿತರ ಮೇಲೆ ಮಾಡಿರುವ ದೌರ್ಜನ್ಯವಾಗಿದೆ ಎಂದು ಹೇಳಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...