alex Certify
ಕನ್ನಡ ದುನಿಯಾ       Mobile App
       

Kannada Duniya

‘ನಾಳೆ ದೆಹಲಿಗೆ ಪ್ರಯಾಣ, ಪ್ರಮಾಣ ವಚನಕ್ಕೆ ಮೋದಿ –ಶಾ ಗೆ ಆಹ್ವಾನ’

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರದ ವೇಳೆಯಲ್ಲೇ ಮೇ 17 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದ್ದ ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ತಮ್ಮ ಹೇಳಿಕೆಯನ್ನು ಪುನರುಚ್ಛರಿಸಿದ್ದಾರೆ.

ನಾಳೆ ಸಂಜೆ ದೆಹಲಿಗೆ ತೆರಳಲಿದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ತಮ್ಮ 45 ವರ್ಷಗಳ ರಾಜಕೀಯ ಜೀವನದಲ್ಲಿಯೇ ಇಷ್ಟು ಪ್ರಮಾಣದ ಕೆಲಸವನ್ನು ಮಾಡಿಲ್ಲ. ಈ ವಿಧಾನಸಭೆ ಚುನಾವಣೆಯಲ್ಲಿ ಕಾರ್ಯಕರ್ತರು ಎಷ್ಟೊಂದು ಶ್ರಮ ಹಾಕಿದ್ದಾರೆ. ಕೇಂದ್ರದ ನಾಯಕರು ನಮ್ಮ ಕೆಲಸವನ್ನು ಮೆಚ್ಚಿದ್ದಾರೆ. 125 -130 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ವ್ಯವಸ್ಥೆಯನ್ನು ಹಾಳುಮಾಡಿದೆ. ಇದನ್ನು ಸರಿಪಡಿಸಲು 3 ತಿಂಗಳು ಬೇಕಾಗುತ್ತದೆ. ಪ್ರಣಾಳಿಕೆ ಬಿಡುಗಡೆಯಾದ ಬಳಿಕ ಶೇ. 3 ರಷ್ಟು ಮತಗಳಿಕೆ ಹೆಚ್ಚಾಗಿದೆ. ಚುನಾವಣೆಯಲ್ಲಿ ಗೆಲ್ಲುವುದು, ಸಿ.ಎಂ. ಆಗುವುದು ಮುಖ್ಯವಲ್ಲ, ಮೋದಿ ಮತ್ತು ಅಮಿತ್ ಶಾ ಅವರು ಇಟ್ಟ ಭರವಸೆ ಈಡೇರಿಸುವುದು ಮುಖ್ಯ. ನಾಳೆ ಸಂಜೆ ದೆಹಲಿಗೆ ತೆರಳಿ ಪ್ರಮಾಣ ವಚನ ಸ್ವೀಕಾರಕ್ಕೆ ದಿನಾಂಕ ನಿಗದಪಡಿಸಿ, ಮೋದಿ –ಅಮಿತ್ ಶಾ ಅವರಿಗೆ ಆಹ್ವಾನ ನೀಡಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...