alex Certify
ಕನ್ನಡ ದುನಿಯಾ       Mobile App
       

Kannada Duniya

ಹಿಂದೆ ಹೇಳಿದಂತೆ ಮೇ 17 ರ ನಾಳೆಯೇ ಬಿ.ಎಸ್.ವೈ. ಪ್ರಮಾಣ ವಚನಕ್ಕೆ ಸಿದ್ಧತೆ…?

ಬೆಂಗಳೂರು: ಮೇ 17 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಿಂದೆಯೇ ಹಲವು ಸಲ ಹೇಳಿದ್ದರು. ಅದರಂತೆ ನಾಳೆಯೇ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಆದ್ರೆ ಈ ಮೊದಲು ಹೇಳಿದಂತೆ ಸ್ಟೇಡಿಯಂನಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ ಪ್ರಮಾಣ ಸ್ವೀಕರಿಸುತ್ತಿಲ್ಲ. ಬದಲಿಗೆ ರಾಜಭವನದಲ್ಲಿ ಅವರು ಸಿ.ಎಂ. ಆಗಿ ಪ್ರಮಾಣ ಸ್ವೀಕರಿಸಲಿದ್ದಾರೆ.

ಬಹುಮತ ಸಾಬೀತುಪಡಿಸುತ್ತೇವೆ ಸರ್ಕಾರ ರಚನೆಗೆ ಅವಕಾಶ ಕೊಡಿ ಎಂದು ಬಿ.ಜೆ.ಪಿ. ನಾಯಕರು ಈಗಾಗಲೇ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಅತಿ ದೊಡ್ಡ ಪಕ್ಷವಾಗಿರುವ ಬಿ.ಜೆ.ಪಿ.ಗೆ ಸರಳ ಬಹುಮತವಿಲ್ಲ. ಬಹುಮತ ಹೊಂದಿರುವ ಜೆ.ಡಿ.ಎಸ್. –ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ರಾಜ್ಯಪಾಲರು ಸಮಾಲೋಚನೆ ಬಳಿಕ ತೀರ್ಮಾನ ಕೈಗೊಳ್ಳಲು ಮುಂದಾಗಿದ್ದಾರೆ.

ದೊಡ್ಡ ಪಕ್ಷವಾಗಿರುವ ಬಿ.ಜೆ.ಪಿ.ಗೆ ಸರ್ಕಾರ ರಚನೆಗೆ ಆಹ್ವಾನ ನೀಡಲಿದ್ದು, ನಾಳೆಯೇ ಬಿ.ಎಸ್.ವೈ. ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲರ ಕಚೇರಿಯಿಂದ ಬಿ.ಎಸ್.ವೈ.ಗೆ ಆಹ್ವಾನ ಪತ್ರ ಕಳಿಸಲಾಗುವುದು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...