alex Certify
ಕನ್ನಡ ದುನಿಯಾ       Mobile App
       

Kannada Duniya

ಸದನದಲ್ಲಿ ಸಿ.ಎಂ. ವಿರುದ್ಧ ಸಿಡಿಯಲಿದೆ ಬಾಂಬ್

ಮಂಗಳೂರು : ನಾಳೆಯಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹಗರಣದ ದಾಖಲೆ ಬಹಿರಂಗಪಡಿಸುವುದಾಗಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿವರ್ತನಾ ಯಾತ್ರೆಯ ಪ್ರವಾಸದಲ್ಲಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಡ್ರಗ್ ಮಾಫಿಯಾವನ್ನು ನಿಯಂತ್ರಿಸುತ್ತಿದೆ. ಸಿದ್ಧರಾಮಯ್ಯನವರ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದ್ದು, ಬೆಳಗಾವಿ ಅಧಿವೇಶನದಲ್ಲಿ ದಾಖಲೆ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ಲೈಂಗಿಕ ದೌರ್ಜನ್ಯ ಪ್ರಕರಣ ಜಗಜ್ಜಾಹೀರಾಗಿದೆ. ಅವರನ್ನು ಉಸ್ತುವಾರಿ ಸ್ಥಾನದಿಂದ ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.

ಬಿ.ಜೆ.ಪಿ. ಸರ್ಕಾರ ಅಧಿಕಾರಕ್ಕೆ ಬಂದ 3 ತಿಂಗಳೊಳಗೆ ಮಂಗಳೂರಿನಲ್ಲಿ ಎನ್.ಐ.ಎ. ಘಟಕ ಆರಂಭಿಸಲಾಗುವುದು. ಪರಿಷತ್ ಚುನಾವಣೆಗೆ ಬಿ.ಜೆ.ಪಿ. ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ, ಕೇಂದ್ರ ಸಮಿತಿಗೆ ಕಳಿಸಲಾಗುವುದು ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...