alex Certify
ಕನ್ನಡ ದುನಿಯಾ       Mobile App
       

Kannada Duniya

ಶಿಕಾರಿಪುರದಿಂದಲೇ ಯಡಿಯೂರಪ್ಪ ಸ್ಪರ್ಧೆ

shikar-bsy

ಶಿವಮೊಗ್ಗ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದ ಬದಲಿಗೆ ಬೇರೆ ಕ್ಷೇತ್ರದಿಂದ ಕಣಕ್ಕಿಳಿಯಲಿಯಲಿದ್ದಾರೆ ಎಂಬ ಸುದ್ದಿ ಹರಿದಾಡಿದ್ದವು.

ಶಿಕಾರಿಪುರದಿಂದ ಅವರ ಪುತ್ರ, ಶಾಸಕ ಬಿ.ವೈ. ರಾಘವೇಂದ್ರ ಕಣಕ್ಕಿಳಿಯಲಿದ್ದಾರೆ. ಭದ್ರಾವತಿ ಇಲ್ಲವೇ ಬೆಂಗಳೂರಿನ ಕ್ಷೇತ್ರವೊಂದರಲ್ಲಿ ಯಡಿಯೂರಪ್ಪ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು.

ಯಡಿಯೂರಪ್ಪ ತಾವು ಸ್ಪರ್ಧಿಸಲಿರುವ ಕ್ಷೇತ್ರಗಳ ಕುರಿತಾಗಿ ಸಂಸ್ಥೆಯೊಂದರಿಂದ ಸಮೀಕ್ಷೆ ನಡೆಸಿ ಮಾಹಿತಿ ತರಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕದ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದೆಲ್ಲಾ ಹೇಳಲಾಗಿತ್ತು.

ಆದರೆ, ಈ ಗೊಂದಲಗಳಿಗೆಲ್ಲಾ ತೆರೆ ಬಿದ್ದಿದೆ. ಯಡಿಯೂರಪ್ಪನವರು ಶಿಕಾರಿಪುರ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಶಿಕಾರಿಪುರ ಕ್ಷೇತ್ರದ ಜನ ನನಗೆ ರಾಜಕೀಯ ಶಕ್ತಿಯನ್ನು ನೀಡಿದ್ದಾರೆ. ಇಲ್ಲಿಂದಲೇ ಸ್ಪರ್ಧಿಸಬೇಕೆಂಬುದು ಕಾರ್ಯಕರ್ತರು, ಅಭಿಮಾನಿಗಳ ಅಪೇಕ್ಷೆಯಾಗಿದೆ. ಹಾಗಾಗಿ ಶಿಕಾರಿಪುರದಿಂದಲೇ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ.

ಶಿಕಾರಿಪುರದಲ್ಲಿ ಬಿ.ಜೆ.ಪಿ. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಬಿ.ಜೆ.ಪಿ. ಸೇರಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರದ ಆಡಳಿತ ವೈಖರಿ ಬಗ್ಗೆ ಜನ ಬೇಸತ್ತಿದ್ದಾರೆ ಎಂದ ಅವರು, ಮುಂದಿನ ಚುನಾವಣೆಯಲ್ಲಿ ಬಿ.ಜೆ.ಪಿ.ಯನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...