alex Certify
ಕನ್ನಡ ದುನಿಯಾ       Mobile App
       

Kannada Duniya

B.S. ಯಡಿಯೂರಪ್ಪಗೆ ಮತ್ತೆ ಸಂಕಷ್ಟ

bsy-bsy-d

ಬೆಂಗಳೂರು: ಡಿನೋಟಿಫಿಕೇಷನ್ ಮತ್ತು ಸ್ವಜನ ಪಕ್ಷಪಾತ ಆರೋಪಗಳಿಗೆ ಸಂಬಂಧಿಸಿದಂತೆ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಲು ಹೈಕೋರ್ಟ್ ಆದೇಶಿಸಿದೆ.

ಸ್ವಜನ ಪಕ್ಷಪಾತ ಮತ್ತು ಡಿನೋಟಿಫಿಕೇಷನ್ ಆರೋಪಗಳಿಗೆ ಸಂಬಂಧಿಸಿದ ಹಳೆಯ ಪ್ರಕರಣಗಳ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಾಗಿದೆ. ಶಿವಮೊಗ್ಗದ ವಕೀಲ ಬಿ. ವಿನೋದ್ ಲೋಕಾಯುಕ್ತ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದು, ಇದನ್ನು ವಜಾಗೊಳಿಸಲಾಗಿತ್ತು.

ಲೋಕಾಯುಕ್ತ ಕೋರ್ಟ್ ಆದೇಶವನ್ನು ಪ್ರಶ್ನಿಸಿ, ವಿನೋದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪುತ್ರಿ ಅರುಣಾದೇವಿಗೆ ಕೆ.ಹೆಚ್.ಬಿ.ಯಿಂದ ನಿವೇಶನ ಮಂಜೂರು, ಹುಣಸೇಕಟ್ಟೆ ಜಂಕ್ಷನ್ ನಲ್ಲಿ ಅರಣ್ಯ ಒತ್ತುವರಿ, ಕೋಟೆ ಗಂಗೂರು ಬಳಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...