alex Certify
ಕನ್ನಡ ದುನಿಯಾ       Mobile App
       

Kannada Duniya

ಎಂ.ಬಿ. ಪಾಟೀಲ್ ಗೆ ಪಶ್ಚಾತ್ತಾಪ : ಬಿ.ಎಸ್.ವೈ.

ಬಾಗಲಕೋಟೆ: ಸಚಿವ ಎಂ.ಬಿ. ಪಾಟೀಲ್ ಪಶ್ಚಾತ್ತಾಪಕ್ಕಾಗಿ ಬಸವೇಶ್ವರರ ಐಕ್ಯ ಮಂಟಪಕ್ಕೆ ಹೋಗಿದ್ದಾರೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರನ್ನು ತಂದಿರುವ ಎಂ.ಬಿ. ಪಾಟೀಲರಿಗೆ ವಿನಾಶಕಾಲೇ ವಿಪರೀತ ಬುದ್ದಿ ಬಂದಂತಿದೆ ಎಂದು ಹೇಳಿದ್ದಾರೆ.

ಪ್ರತ್ಯೇಕ ಧರ್ಮದ ವಿಚಾರವಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ. ಈ ವಿಚಾರದಲ್ಲಿ ಪಾಟೀಲರು ಸ್ವಾಮೀಜಿಯವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಪದೇ ಪದೇ ಹೀಗೆ ಸ್ವಾಮೀಜಿ ಹೆಸರನ್ನು ಎಳೆದು ತಂದರೆ, ಯಾವ ಸಮಾಜದವರೂ ಒಪ್ಪುವುದಿಲ್ಲ. ಪಾಟೀಲರು ಇನ್ನಾದರೂ ಸ್ವಾಮೀಜಿ ಹೆಸರನ್ನು ಪ್ರಸ್ತಾಪಿಸಬಾರದು ಎಂದು ಸಲಹೆ ನೀಡಿದ್ದಾರೆ.

ಲಿಂಗಾಯತ ಧರ್ಮದ ವಿಚಾರವಾಗಿ ಯಾರೂ ರಾಜಕಾರಣ ಮಾಡಬಾರದು. ವೀರಶೈವ ಮಹಾಸಭಾ ಕೈಗೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕೆಂದು ಹಿಂದೆಯೇ ಹೇಳಿದ್ದೆ. ಅದರಂತೆಯೇ ಇರುತ್ತೇನೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...