alex Certify
ಕನ್ನಡ ದುನಿಯಾ       Mobile App
       

Kannada Duniya

ವಿಚಾರಣೆಗೆ ಹಾಜರಾಗಲು ಬಿ.ಎಸ್.ವೈ.ಗೆ ನೋಟಿಸ್

ಬೆಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ಪಿ.ಎ. ವಿನಯ್ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗೆ ಹಾಜರಾಗಲು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಲಾಗಿದೆ.

ಯಡಿಯೂರಪ್ಪನವರ ಆಪ್ತ ಸಹಾಯಕ ಸಂತೋಷ್ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರು ಜಾಮೀನು ಪಡೆದುಕೊಂಡಿದ್ದಾರೆ.

ಈ ಅಪಹರಣ ಪ್ರಕರಣದಲ್ಲಿ ಯಡಿಯೂರಪ್ಪನವರೂ ವಿಚಾರಣೆ ಎದುರಿಸುವಂತಾಗಿದೆ. ಡಾಲರ್ಸ್ ಕಾಲೋನಿಯಲ್ಲಿಯಲ್ಲಿರುವ ಬಿ.ಎಸ್.ವೈ. ನಿವಾಸಕ್ಕೆ ತೆರಳಿ ನೋಟಿಸ್ ನೀಡಲಾಗಿದೆ.

ಮಲ್ಲೇಶ್ವರಂ ಎ.ಸಿ.ಪಿ. ಬಡಿಗೇರ್ ಅವರು ನೋಟಿಸ್ ನೀಡಿದ್ದು, ಸೆಪ್ಟಂಬರ್ 28 ರಂದು ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...