alex Certify
ಕನ್ನಡ ದುನಿಯಾ       Mobile App
       

Kannada Duniya

3 ನೇ ಪಟ್ಟಿಯಲ್ಲೂ ಬಿ.ಎಸ್.ವೈ. ಪುತ್ರನಿಗಿಲ್ಲ ಟಿಕೆಟ್, ಕೆಲವರ ಮಕ್ಕಳಿಗೆ ಚಾನ್ಸ್

ವಿಧಾನಸಭೆ ಚುನಾವಣೆಗೆ 59 ಕ್ಷೇತ್ರಗಳ ಬಿ.ಜೆ.ಪಿ. ಅಭ್ಯರ್ಥಿಗಳ 3 ನೇ ಪಟ್ಟಿಯನ್ನು  ಬಿಡುಗಡೆ ಮಾಡಲಾಗಿದೆ. 3 ನೇ ಪಟ್ಟಿಯಲ್ಲಿಯೂ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಟಿಕೆಟ್ ಘೋಷಣೆಯಾಗಿಲ್ಲ.

ಸಿ.ಎಂ. ಸಿದ್ಧರಾಮಯ್ಯ ಪುತ್ರ ಡಾ. ಯತೀಂದ್ರ ಸ್ಪರ್ಧಿಸಿರುವ ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಈಗಾಗಲೇ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಅವರಿಗೆ 4 ನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗುವ ಸಾಧ್ಯತೆ ಇದೆ.

ಆದರೆ ಮೊದಲ ಪಟ್ಟಿಯಲ್ಲಿ ಗೋವಿಂದರಾಜನಗರ ಕ್ಷೇತ್ರದಿಂದ ಟಿಕೆಟ್ ಪಡೆದುಕೊಂಡಿರುವ ವಿ. ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಅವರಿಗೆ ಅರಸೀಕೆರೆ ಕ್ಷೇತ್ರದಲ್ಲಿ ಅವಕಾಶ ನೀಡಲಾಗಿದೆ. ವಿಧಾನ ಪರಿಷತ್ ಸದಸ್ಯ ರಾಮಚಂದ್ರಗೌಡರ ಪುತ್ರ ಸಪ್ತಗಿರಿಗೌಡರಿಗೆ ಚಾನ್ಸ್ ಸಿಕ್ಕಿದೆ.

ಕೆ.ಜಿ.ಎಫ್.ನಿಂದ ವೈ.ಸಂಪಂಗಿ ಪುತ್ರಿ ಎಸ್. ಅಶ್ವಿನಿ ಅವರಿಗೆ, ನಾಗಠಾಣದಿಂದ ಗೋವಿಂದ ಕಾರಜೋಳ ಪುತ್ರ ಗೋಪಾಲ ಕಾರಜೋಳ ಅವರಿಗೆ ಟಿಕೆಟ್ ಘೋಷಣೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...