alex Certify
ಕನ್ನಡ ದುನಿಯಾ       Mobile App
       

Kannada Duniya

‘ಹಿಂದೂ ಮುಖಂಡರನ್ನು ಕೊಂದ ಬಿ.ಜೆ.ಪಿ. ನಾಯಕರು’

ಮಂಗಳೂರು: ಮುಂದಿನ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿ.ಜೆ.ಪಿ. ವತಿಯಿಂದ ಹಮ್ಮಿಕೊಂಡಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸುತ್ತಿದೆ.

ಸುಳ್ಯದಲ್ಲಿ ನಡೆದ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಸಂಸದ ಬಿ. ಶ್ರೀರಾಮುಲು ಯಡವಟ್ಟು ಮಾಡಿಕೊಂಡಿದ್ದಾರೆ.

ಭಾಷಣ ಮಾಡುವ ಸಂದರ್ಭದಲ್ಲಿ, ಪಕ್ಷದ ನಾಯಕರಾದ ಶೋಭಾ ಕರಂದ್ಲಾಜೆ, ಯಡಿಯೂರಪ್ಪ, ಡಿ.ವಿ. ಸದಾನಂದಗೌಡ ಅವರು ಹಿಂದೂ ಮುಖಂಡರನ್ನು ಹತ್ಯೆ ಮಾಡುವಂತಹ ಕೆಲಸ ಮಾಡಿದ್ದಾರೆ. ಇದನ್ನು ನೀವೆಲ್ಲಾ ನೋಡಿದ್ದೀರಿ ಎಂದು ಬಾಯಿತಪ್ಪಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರವನ್ನು ಟೀಕಿಸುವ ಭರಾಟೆಯಲ್ಲಿ ಶ್ರೀರಾಮುಲು, ಇಂತಹ ಹೇಳಿಕೆ ನೀಡಿದ್ದಾರೆ. ಇದರಿಂದ ವೇದಿಕೆ ಮೇಲಿದ್ದ ನಾಯಕರು ಕೆಲಕಾಲ ಕಂಗಾಲಾಗಿದ್ದಾರೆ.

ತಮ್ಮ ಹೇಳಿಕೆ ಬಗ್ಗೆ ತಕ್ಷಣವೇ ಎಚ್ಚೆತ್ತುಕೊಂಡ ಶ್ರೀರಾಮುಲು, ಕಾಂಗ್ರೆಸ್, ಹಿಂದೂ ಮುಖಂಡರನ್ನು ಹತ್ಯೆ ಮಾಡುವ ಕೆಲಸವನ್ನು ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...