alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯೇಂದ್ರ ಸ್ಪರ್ಧೆ ಇಲ್ಲ, ಯುವ ಮೋರ್ಚಾ ಪದಾಧಿಕಾರಿಯಾಗಿ ನೇಮಕ

ಮೈಸೂರು: ವರುಣಾ ಕ್ಷೇತ್ರದಲ್ಲಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿ.ಜೆ.ಪಿ. ಟಿಕೆಟ್ ಕೈತಪ್ಪಿದ್ದು, ರಾಜ್ಯ ಬಿ.ಜೆ.ಪಿ. ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಅವರನ್ನು ನೇಮಕ ಮಾಡಲಾಗಿದೆ.

ಮೈಸೂರಿನ ಹೋಟೆಲ್ ನಲ್ಲಿ ಸತತ 2 ಗಂಟೆ ಕಾಲ ಯಡಿಯೂರಪ್ಪ ಹಾಗೂ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ರಾಜ್ಯ ಬಿ.ಜೆ.ಪಿ. ಉಸ್ತುವಾರಿ ಮುರಳೀಧರರಾವ್ ಅವರು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಬಿ.ಜೆ.ಪಿ. ಮುಖಂಡರು, ಅಭ್ಯರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ವಿಜಯೇಂದ್ರ ಅವರಿಗೆ ಟಿಕೆಟ್ ನೀಡಬೇಕೆಂದು ತೀವ್ರ ಒತ್ತಡವಿದ್ದರೂ, ಅವರ ಬದಲಿಗೆ ಬೇರೆ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ಯಡಿಯೂರಪ್ಪ ಪುತ್ರನಿಗೆ ಟಿಕೆಟ್ ಕೊಡಿಸಲು ನಡೆಸಿದ ಪ್ರಯತ್ನ ವಿಫಲವಾಗಿದೆ.

ಸುದೀರ್ಘ ಚರ್ಚೆ ಬಳಿಕ ಸಭೆ ಮುಗಿಸಿ ಹೊರ ಬಂದ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯೇಂದ್ರ ಅವರು ಸ್ಪರ್ಧಿಸುತ್ತಿಲ್ಲ. ಅವರು ಇಲ್ಲೇ ಉಳಿದು ಎಲ್ಲಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ವಿಜಯೇಂದ್ರ ಬೆಂಬಲಿಗರು ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...