alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಾಹುಬಲಿ 2’ ವಿರುದ್ದದ ಪ್ರತಿಭಟನೆ ವಾಪಾಸ್

sathyaraj-apologises-for-anti-kannadiga-remarkಕನ್ನಡಿಗರ ವಿರುದ್ದ ಅವಹೇಳನಾಕಾರಿಯಾಗಿ ಮಾತನಾಡಿದ್ದ ಕಾರಣಕ್ಕೆ ತೀವ್ರ ಆಕ್ರೋಶಕ್ಕೆ ಒಳಗಾಗಿದ್ದ ಬಾಹುಬಲಿಯ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್, ಕ್ಷಮೆ ಕೋರಿದ ಬಳಿಕ ಕನ್ನಡಪರ ಸಂಘಟನೆಗಳು ಇದನ್ನು ಮನ್ನಿಸಿ ‘ಬಾಹುಬಲಿ-ದಿ ಕನ್ ಕ್ಲೂಸನ್’ ಚಿತ್ರ ಬಿಡುಗಡೆಗೆ ಅಡ್ಡಿಯುಂಟು ಮಾಡದಿರಲು ತೀರ್ಮಾನಿಸಿದ್ದಾರೆ.

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ವಿವಿಧ ಕನ್ನಡ ಪರ ಸಂಘಟನೆಗಳ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ, ಸತ್ಯರಾಜ್ ವಿಡಿಯೋ ಸಂದೇಶದ ಮೂಲಕ ಕನ್ನಡಿಗರ ಕ್ಷಮೆ ಕೋರಿರುವುದರಿಂದ ‘ಬಾಹುಬಲಿ-ದಿ ಕನ್ ಕ್ಲೂಸನ್’ ಚಿತ್ರ ಬಿಡುಗಡೆಗೆ ಯಾವುದೇ ವಿರೋಧ ಮಾಡಬಾರದೆಂದು ತೀರ್ಮಾನಿಸಲಾಯಿತು. ಅಲ್ಲದೇ ಇದೇ 28 ರಂದು ನಡೆಸಲುದ್ದೇಶಿಸಿದ್ದ ಪ್ರತಿಭಟನೆಯನ್ನು ಕೈ ಬಿಡಲಾಯಿತು.

ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಯಾರ ವಿರುದ್ದವೂ ತಮಗೆ ವೈಯಕ್ತಿಕ ದ್ವೇಷವಿಲ್ಲ. ಕಾವೇರಿ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡುವಾಗ ನಾಲಿಗೆಗೆ ಲಗಾಮು ಹಾಕಿಕೊಳ್ಳಬೇಕು ಎಂದಿದ್ದಾರೆ. ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ಅಡ್ಡಿಯುಂಟು ಮಾಡಲಾಗಿದೆ ಎಂಬುದನ್ನು ತಳ್ಳಿ ಹಾಕಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ಅಂತಹ ಯಾವುದೇ ಬೆಳವಣಿಗೆ ನಡೆದಿಲ್ಲ. ಕನ್ನಡ ಚಿತ್ರಗಳು ಅಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು, ಈ ಕುರಿತು ತಮಗೆ ಅಧಿಕೃತ ಮಾಹಿತಿ ಬಂದಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...