alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಎಸ್.ವೈ., ಹೆಚ್.ಡಿ.ಕೆ. ಕುರಿತು ವ್ಯಂಗ್ಯವಾಡಿದ ಸಿ.ಎಂ

ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಕಾಳಿದಾಸ ಹೈಸ್ಕೂಲ್ ಮೈದಾನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರ ಒತ್ತಾಸೆಯಂತೆ ಇಲ್ಲಿ ಸ್ಪರ್ಧಿಸಿದ್ದೇನೆ ಎಂದು ತಿಳಿಸಿದ್ದಾರೆ.

ಬಾದಾಮಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿ ಹೋಗಿ, ನಾವು ಗೆಲ್ಲಿಸುತ್ತೇವೆ ಎಂದು ಇಲ್ಲಿನ ಮುಖಂಡರು ಒತ್ತಾಯ ಮಾಡಿದ್ರು. ಹೈಕಮಾಂಡ್ ಕೂಡ ಸ್ಪರ್ಧಿಸುವಂತೆ ಹೇಳಿದೆ. ಹಾಗಾಗಿ ನಿಮ್ಮೆಲ್ಲರ ಪ್ರತಿನಿಧಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಮುಖ್ಯಮಂತ್ರಿಯಾಗಿ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೇನೆ. ನನ್ನ ನಾಯಕತ್ವದಲ್ಲಿಯೇ ಚುನಾವಣೆ ನಡೆಯುತ್ತಿದೆ. ಮತ್ತೆ ಮುಖ್ಯಮಂತ್ರಿಯಾಗಲು ನೀವು ನನ್ನನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರಂತಹ ಸುಳ್ಳುಗಾರ ಮತ್ತೊಬ್ಬರು ಇಲ್ಲ. ರೈತರ ಸಾಲ ಮನ್ನಾ ಮಾಡದ ಮೋದಿ, ಯಡಿಯೂರಪ್ಪ, ಅಮಿತ್ ಶಾ ರೈತರ ಪರವಾಗಿದ್ದಾರಾ? ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಸಾಲ ಮನ್ನಾ ಮಾಡಲಿಲ್ಲ ಎಂದು ದೂರಿದ್ದಾರೆ.

ಬಿ.ಜೆ.ಪಿ.ಯವರಿಗೆ ಸಾಲ ಮನ್ನಾ ಮಾಡಿಸಿ ಎಂದರೆ ತುಟಿ ಬಿಚ್ಚಲಿಲ್ಲ. ಯಡಿಯೂರಪ್ಪ ರೈತ ನಾಯಕರು, ಕುಮಾರಸ್ವಾಮಿ ಅವರು ಮಣ್ಣಿನ ಮಕ್ಕಳು ಎಂದು ವ್ಯಂಗ್ಯವಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...