alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀರಾಮುಲು ಮಣಿಸಲು ಸಿ.ಎಂ. ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದಾರೆ.

ಬಾದಾಮಿಯಲ್ಲಿ ಸಿದ್ಧರಾಮಯ್ಯ ವಿರುದ್ಧ ಸಂಸದ ಶ್ರೀರಾಮುಲು ಅವರನ್ನು ಬಿ.ಜೆ.ಪಿ. ಕಣಕ್ಕಿಳಿಸಿದೆ. ಬಾದಾಮಿಯಲ್ಲಿ ಕುರುಬರು ಮತ್ತು ವಾಲ್ಮೀಕಿ ಸಮುದಾಯದ ಮತಗಳು ನಿರ್ಣಾಯಕವಾಗಿದ್ದು, ಇವೆರೆಡು ಸಮುದಾಯದ ಮತಗಳನ್ನು ಕ್ರೋಢೀಕರಿಸಲು ಸಿದ್ಧರಾಮಯ್ಯ ಮುಂದಾಗಿದ್ದಾರೆ.

ಬಾದಾಮಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕುರುಬರು ಮತ್ತು ವಾಲ್ಮೀಕಿ ಸಮುದಾಯದ ಮತಗಳು ವಿಭಜನೆಯಾಗದಂತೆ ನೋಡಿಕೊಳ್ಳಲು ಸಿ.ಎಂ. ತಂತ್ರಗಾರಿಕೆ ರೂಪಿಸಿದ್ದಾರೆ. ನಿನ್ನೆ ರಾತ್ರಿ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ, ಆಪ್ತ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಶ್ರೀರಾಮುಲು ಅವರೂ ಅದೇ ಸಮುದಾಯಕ್ಕೆ ಸೇರಿದ್ದು, ಮತಗಳು ವಿಭಜನೆಯಾಗುವ ಸಾಧ್ಯತೆ ಇದೆ. ವಾಲ್ಮೀಕಿ ಸಮುದಾಯವನ್ನು ಸೆಳೆಯುವ ಜೊತೆಗೆ ಎಲ್ಲಾ ವರ್ಗದವರನ್ನು ವಿಶ್ವಾಸಕ್ಕೆ ಪಡೆದು ಪರಿಣಾಮಕಾರಿಯಾಗಿ ಪ್ರಚಾರ ನಡೆಸಬೇಕೆಂದು ಸಿ.ಎಂ. ತಿಳಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...