alex Certify
ಕನ್ನಡ ದುನಿಯಾ       Mobile App
       

Kannada Duniya

ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ: ತಾಯಿ, ಮಗ ಸಾವು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ರನ್ನ ಬೆಳಗಲಿ ಗ್ರಾಮದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ತಾಯಿ, ಮಗ ಮೃತಪಟ್ಟಿದ್ದಾರೆ.

ಸವಿತಾ ತೇಲಿ, ಅವರ ಮಗ ಪ್ರವೀಣ್ ಮೃತಪಟ್ಟವರೆಂದು ಗುರುತಿಸಲಾಗಿದೆ. ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಟ್ರ್ಯಾಕ್ಟರ್ ನಡಿ ಸಿಲುಕಿದ್ದ ಮೂವರನ್ನು ರಕ್ಷಿಸಲಾಗಿದೆ. ಅಪಘಾತದಲ್ಲಿ 6 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಜೆ.ಸಿ.ಬಿ. ಮೂಲಕ ಟ್ರ್ಯಾಕ್ಟರ್ ಕಬ್ಬನ್ನು ತೆರವುಗೊಳಿಸಲಾಗಿದೆ. ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...