alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳ್ಳಂಬೆಳಿಗ್ಗೆ ಭೀಕರ ಅಪಘಾತದಲ್ಲಿ 6 ಮಂದಿ ಸಾವು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಕೊರ್ತಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರ ಪಾಸಿಂಗ್ ಹೊಂದಿರುವ ಕ್ರೂಸರ್, ಕೆ.ಎಸ್.ಆರ್.ಟಿ.ಸಿ. ಬಸ್ ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದ್ದು, ಕ್ರೂಸರ್ ನಲ್ಲಿದ್ದ 6 ಮಂದಿ ಮೃತಪಟ್ಟಿದ್ದಾರೆ.

6 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕ್ರೂಸರ್ ಡಿಕ್ಕಿ ಹೊಡೆದ ರಭಸಕ್ಕೆ ವಿಜಯಪುರದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲಾ ಪಾರಾಗಿದ್ದಾರೆ.

ಅಪಘಾತದ ತೀವ್ರತೆಗೆ ಕ್ರೂಸರ್ ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲು, ಗಾಯಾಳುಗಳನ್ನು ರಕ್ಷಿಸಲು ಹರಸಾಹಸ ನಡೆಸಲಾಗಿದೆ. ಬೀಳಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...