alex Certify
ಕನ್ನಡ ದುನಿಯಾ       Mobile App
       

Kannada Duniya

ಗರ್ಭಿಣಿಗೆ ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಗು ಸಾವು

ಬಾಗಲಕೋಟೆ: ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿಗೆ ಸಕಾಲಕ್ಕೆ ಚಿಕಿತ್ಸೆ ಸಿಗದೇ, ಜನಿಸಿದ ಕೂಡಲೇ ಮಗು ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬಾದಾಮಿ ತಾಲ್ಲೂಕಿನ ಹಲಕುರ್ಕಿಯ 31 ವರ್ಷದ ಭಾರತಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಕುಟುಂಬದವರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ.

ಆದರೆ, ಅಲ್ಲಿ ವೈದ್ಯರಿಲ್ಲದ ಕಾರಣ 2 ಗಂಟೆಗಳ ಕಾಲ ಕಾದಿದ್ದಾರೆ. ಕೊನೆಗೆ ಆಂಬುಲೆನ್ಸ್ ನಲ್ಲಿ ಬಾದಾಮಿ ತಾಲ್ಲೂಕು ಆಸ್ಪತ್ರೆಗೆ ಹೊರಟಿದ್ದು, ಹೆರಿಗೆ ನೋವು ಜಾಸ್ತಿಯಾಗಿ ಆಂಬುಲೆನ್ಸ್ ನಲ್ಲೇ ಹೆರಿಗೆಯಾಗಿದೆ.

ಮಗು ಮೃತಪಟ್ಟಿದ್ದು, ಇದಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬದವರು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...