alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಟೇರಿಂಗ್ ಕಟ್ ಆಗಿ ಹಳ್ಳಕ್ಕೆ ಬಿದ್ದ ಬಸ್

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸಾವಳಗಿ ಬಳಿ ಸ್ಟೇರಿಂಗ್ ಕಟ್ ಆಗಿ ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿದೆ.

ಸಾವಳಗಿ ಬಳಿ ಬಸ್ ಚಲಿಸುತ್ತಿದ್ದ ಸಂದರ್ಭದಲ್ಲಿ ಸ್ಟೇರಿಂಗ್ ಕಟ್ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿದೆ. ಚಾಲಕ, ನಿರ್ವಾಹಕ ಸೇರಿ 6 ಮಂದಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳೀಯರು ಸ್ಥಳಕ್ಕೆ ಧಾವಿಸಿ ಬಸ್ ನಲ್ಲಿದ್ದವರನ್ನು ರಕ್ಷಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆಂಬುಲೆನ್ಸ್ ತಕ್ಷಣಕ್ಕೆ ಬಾರದ ಕಾರಣ ಗಾಯಾಳುಗಳು ಅರ್ಧ ಗಂಟೆಗೂ ಅಧಿಕ ಸಮಯ ರಸ್ತೆಯಲ್ಲೇ ನರಳಾಡಿದ್ದಾರೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...