alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರೀತಿಸಿ ಮದುವೆಯಾಗಿದ್ದ ದಂಪತಿ ಅನುಮಾನಾಸ್ಪದ ಸಾವು

ಬಾಗಲಕೋಟೆ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಅನುಮಾನಾಸ್ಪದವಾಗಿ ಸಾವು ಕಂಡಿರುವ ಘಟನೆ ಹುನಗುಂದ ತಾಲ್ಲೂಕಿನ ಕಮತಗಿ –ಐಹೊಳೆ ರಸ್ತೆಯಲ್ಲಿ ನಡೆದಿದೆ.

ಕೈರವಾಡಗಿಯ ಸಂಗಮೇಶ್(28) ಹಾಗೂ ಆತನ ಪತ್ನಿ ಅಪಘಾತದಲ್ಲಿ ಮೃತಪಟ್ಟಿರುವಂತೆ ಕಂಡು ಬಂದಿದೆ. ಆದರೆ, ಸ್ಥಳದಲ್ಲಿ ಅಪಘಾತವಾದ ಯಾವ ಲಕ್ಷಣಗಳಿಲ್ಲ. ದಂಪತಿಯನ್ನು ಬೇರೆ ಕಡೆ ಕೊಲೆ ಮಾಡಿ ಇಲ್ಲಿಗೆ ಮೃತದೇಹ ತಂದು ಹಾಕಿರಬಹುದೆಂದು ಶಂಕಿಸಲಾಗಿದೆ.

ಇಲ್ಲವೇ ರಸ್ತೆಯಲ್ಲಿ ಸಾಗುತ್ತಿದ್ದ ದಂಪತಿ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿರಬಹುದೆಂದು ಹೇಳಲಾಗಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...