alex Certify
ಕನ್ನಡ ದುನಿಯಾ       Mobile App
       

Kannada Duniya

ಲಿಂಗಾಯತ ಧರ್ಮ: ಎಸ್.ಎಸ್. ಮಲ್ಲಿಕಾರ್ಜುನ್ ಟಾಂಗ್ ಕೊಟ್ಟಿದ್ದೀಗೆ….

ಬಾಗಲಕೋಟೆ: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಆರೋಪ, ಪ್ರತ್ಯಾರೋಪ ಮುಂದುವರೆದಿವೆ. ಬಾಗಲಕೋಟೆಯಲ್ಲಿ ಲಿಂಗಾಯತ ಧರ್ಮದ ವಿಚಾರವಾಗಿ ಮಾತನಾಡಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸಚಿವ ಎಂ.ಬಿ. ಪಾಟೀಲ್ ಮೊದಲಾದವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಮನೆ ಅಂದಮೇಲೆ ಎಲ್ಲಾ ರೀತಿಯ ಜನರಿರುತ್ತಾರೆ. ಹಾಳು ಮಾಡುವವರು ಇರ್ತಾರೆ, ಉದ್ಧಾರ ಮಾಡುವವರೂ ಇರ್ತಾರೆ ಎಂದು ಹೇಳಿದ್ದಾರೆ.

ಕಾರ್ಯಕ್ರಮ ನಿಮಿತ್ತ ಬಾಗಲಕೋಟೆಗೆ ಆಗಮಿಸಿದ್ದ ಎಸ್.ಎಸ್. ಮಲ್ಲಿಕಾರ್ಜುನ್, ಲಿಂಗಾಯತ ಧರ್ಮದ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಒಂದು ಮನೆ ಅಂದ ಮೇಲೆ ಹಾಳು ಮಾಡುವವರು, ಉದ್ಧಾರ ಮಾಡುವವರು ಇರ್ತಾರೆ. ಸಮಾಜ, ಪಕ್ಷ, ರಾಜಕಾರಣ ಬೇರೆ ಬೇರೆಯಾಗಿದ್ದು, ಹಿರಿಯರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾ ಕೈಗೊಂಡಿರುವ ನಿರ್ಧಾರ ಸರಿಯಾಗಿದೆ. ಸಮಾಜದ ಸ್ವಾಮೀಜಿಗಳು, ಹಿರಿಯರು ಮನೆಯನ್ನು ಮುನ್ನಡೆಸಿಕೊಂಡು ಹೋಗುತ್ತಾರೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...