alex Certify
ಕನ್ನಡ ದುನಿಯಾ       Mobile App
       

Kannada Duniya

ರಸ್ತೆ ದುರಸ್ತಿಗೆ ಮನವಿ ಕೊಡಲು ಬಂದಿದ್ದ ಸ್ವಾಮೀಜಿ ಹೃದಯಾಘಾತದಿಂದ ನಿಧನ

ರಸ್ತೆ ದುರಸ್ತಿ ಮಾಡಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಬಂದಿದ್ದ ಸ್ವಾಮೀಜಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆ, ಜಮಖಂಡಿ ತಾಲೂಕಿನ ಇನಾಂ ಹಂಚಿನಾಳ ಗ್ರಾಮದ ಜ್ಞಾನ ಸಿದ್ಧಾಶ್ರಮದ ಶ್ರೀಗಳು ಮೃತಪಟ್ಟವರಾಗಿದ್ದು ಇವರು ತಮ್ಮ ಆಶ್ರಮಕ್ಕೆ ತೆರಳುವ ಕಚ್ಚಾ ರಸ್ತೆಯನ್ನು ದುರಸ್ತಿ ಮಾಡಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಆಗಮಿಸಿದ್ದರೆಂದು ಹೇಳಲಾಗಿದೆ.

74 ವರ್ಷದ ಸೋಮಲಿಂಗೇಶ್ವರ ಶ್ರೀಗಳು, ಜಿಲ್ಲಾಡಳಿತ ಭವನದ ಚುನಾವಣಾ ಕೊಠಡಿಯ ಬಳಿ ತೆರಳುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರಥಮ ಚಿಕಿತ್ಸೆ ನೀಡಿದರಾದರೂ ಅದಕ್ಕೆ ಸ್ಪಂದಿಸದ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...